ಹದಿಹರೆಯದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗಳ ಮಾಹಿತಿ ಮತ್ತು ಆಪ್ತ ಸಂವಾದ ಕುರಿತ ಕೃತಿ-ಹದಿಹರೆಯದ ಕನಸುಗಳೊಂದಿಗೆ. ಹದಿಹರೆಯದ ಬದಲಾವಣೆಗಳ ಬಗ್ಗೆ ವೈಜ್ಞಾನಿಕ ವಿವರಣೆ ಮತ್ತು ತಿಳಿವಳಿಕೆ ನೀಡುವ ಕೈಪಿಡಿಯನ್ನು ಲೇಖಕಿ ಸುಧಾ ಆಡುಕಳ (ಸುಧಾ ಹೆಗಡೆ) ಅವರು ನೀಡಿದ್ದಾರೆ.
ಸುಧಾ ಆಡುಕಳ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳ ಗ್ರಾಮದವರಾದ ಶ್ರೀಮತಿ ಸುಧಾ ಆಡುಕಳ ಅವರು ಪ್ರಸ್ತುತ ಉಡುಪಿಯ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಾಧಾ, ನೃತ್ಯಗಾಥಾ, ಆನಂದಭಾವಿನಿ, ಮಾಧವಿ ಮೊದಲಾದ ಏಕವ್ಯಕ್ತಿ ನಾಟಕಗಳನ್ನು, ಮಕ್ಕಳ ರವೀಂದ್ರ, ಕನಕ-ಕೃಷ್ಣ, ಮಕ್ಕಳ ರಾಮಾಯಣ, ಬ್ರಹ್ಮರಾಕ್ಷಸ ಮತ್ತು ಕಥೆ, ಮರ ಮತ್ತು ಮನುಷ್ಯ ಮೊದಲಾದ ಮಕ್ಕಳ ನಾಟಕಗಳನ್ನು ರಚಿಸಿರುತ್ತಾರೆ. ರವೀಂದ್ರನಾಥ ಟ್ಯಾಗೋರರ ಕೆಂಪು ಕಣಗಿಲೆ, ಚಿತ್ರಾ ಮತ್ತು ಅವಳ ಕಾಗದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ಇವರ ‘ಬಕುಲದ ಬಾಗಿಲಿನಿಂದ’ ಕೃತಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನ ...
READ MORE