ಹಗರಿಬೊಮ್ಮನಹಳ್ಳಿ ತಾಲೂಕಿನ ಪರಿಚಯ ನೀಡುವ ಈ ಹೊತ್ತಿಗೆ. ತಾಲೂಕಿನ ಬಗ್ಗೆ ಒಂದು ಕೈಪಿಡಿಯಂತೆ ಮೂಡಿ ಬಂದಿದೆ. ತಾಲೂಕಿನ ಐತಿಹಾಸಿಕ ಸ್ಥಳಗಳು, ವಿಸ್ತಾರ, ಜನಸಂಖ್ಯೆ, .ಸಾಹಿತ್ಯ, ಕಲೆ ಹೀಗೆ ಹತ್ತಾರು ಕ್ಷೇತ್ರಗಳ ಬಗ್ಗೆ ಪರಿಚಯ ಮಾಡಿಕೊಡುತ್ತದೆ. ತಾಲೂಕಿನಲ್ಲಿ ವಿವಿಧ ರಂಗಗಳಲ್ಲಿ ಆಗಬೇಕಾದ ಪ್ರಗತಿಯತ್ತಲೂ ಬೆರಳು ಮಾಡಿ ತೋರಿಸಿದೆ. ನಾಡಿನ ಇತಿಹಾಸ, ಸಂಸ್ಕೃತಿ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನ ಮಾಡುವವರಿಗೆ ಈ ಕೃತಿಯಲ್ಲಿಯ ವಿಷಯಗಳು ಆಕರ ಸಾಮಗ್ರಿಗಳಾಗುತ್ತವೆ ಎಂದು ಕೃತಿಗೆ ಮುನ್ನುಡಿ ಬರೆದ ಡಾ.ಸೂರ್ಯನಾಥ ಯು.ಕಾಮತ್ ಪ್ರಶಂಸಿಸಿದ್ದಾರೆ.
ಪರಮೇಶ್ವರಯ್ಯ ಸೊಪ್ಪಿಮಠ: 1974 ಸೆಪ್ಟೆಂಬರ್ 21ರಂದು ಬಳ್ಳಾರಿ ಜಿಲ್ಲೆ, ಹಗರಿಬೊಮ್ಮನಹಳ್ಳಿಯಲ್ಲಿ ಜನನ. ಪ್ರಾಥಮಿಕದಿಂದ ಪಿ.ಯು.ವರೆಗೂ ಹ.ಬೊ.ಹಳ್ಳಿಯಲ್ಲಿ ವಿದ್ಯಾಭ್ಯಾಸ. ಶಿಕ್ಷಕ ತರಬೇತಿಯು ತುಮಕೂರಿನ ಸಿದ್ಧಗಂಗಾಮಠದಲ್ಲಿ ಆಯಿತು. ತದನಂತರ ದೂರಶಿಕ್ಷಣದ ಮುಖಾಂತರ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಬಿ.ಎ ಪದವಿ ಹಾಗೂ ಎಂ.ಎ. (ಕನ್ನಡ) ಸ್ನಾತಕೋತ್ತರ ಶಿಕ್ಷಣ. ಎಂ.ಎ. (ಪತ್ರಿಕೋದ್ಯಮ) ಸ್ನಾತಕೋತ್ತರ ಶಿಕ್ಷಣವನ್ನು ಕನ್ನಡ ವಿ.ವಿ. ಹಂಪಿಯಲ್ಲಿ ಅಭ್ಯಾಸ. ಪ್ರಸ್ತುತ ಕನ್ನಡ ವಿ.ವಿ. ಹಂಪಿಯ ಕನ್ನಡ ಅಧ್ಯಯನ ವಿಭಾಗದಲ್ಲಿ “ಮಕ್ಕಳ ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆ” ವಿಷಯದ ಮೇಲೆ ಪಿಹೆಚ್.ಡಿ. ಅಧ್ಯಯನ. 1998ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸಕ್ಕೆ ಸೇರ್ಪಡೆ. ಶಿಕ್ಷಕಿ ವನಿತಾರೊಂದಿಗೆ ...
READ MORE