ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸೈದ್ಧಾಂತಿಕ ಸಂಗತಿಗಳನ್ನು ಈ ಕೃತಿಯಲ್ಲಿ ಲೇಖಕ ಡಾ. ಟಿ.ಆರ್. ಚಂದ್ರಶೇಖರ್ ಅವರು ಚರ್ಚಿಸಿದ್ದಾರೆ. ಅಭಿವೃದ್ಧಿಯ ವಿವಿಧ ಮಜಲುಗಳ ಕುರಿತು ಆಳವಾಗಿ ಅಳ ಅಧ್ಯಯನ ಇಲ್ಲಿದೆ.
ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಟಿ.ಆರ್. ಚಂದ್ರಶೇಖರ್ ಅವರು ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಅವರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕೂಡ ಆಗಿದ್ದರು. 2103ರಲ್ಲಿ ನಿವೃತ್ತರಾದ ನಂತರ ಬೆಂಗಳೂರು ನಿವಾಸಿಯಾಗಿದ್ದಾರೆ. ಅಭಿವೃದ್ಧಿ ಅದರ ಪರಿಕಲ್ಪನೆ ಹಾಗೂ ಯೋಜನೆಗಳ ಜಾರಿ, ನೀತಿ-ನಿರೂಪಣೆಗಳಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ವರದಿ ಸಿದ್ಧಪಡಿಸಿದ್ದಾರೆ. ...
READ MORE