ಹಿರಿಯ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕೃತಿ-ಹಳೆಯಪಳೆಯ ಮುಖಗಳು. ಅಂದಿನ ಕಾಲದ ಹಲವು ಚಿತ್ರ-ವ್ಯಕ್ತಿ-ಸನ್ನಿವೇಶ ಗಳನ್ನು ಅಕ್ಷರದ ಮೂಲಕ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ಹಳೆಯಪಳೆಯ ಮುಖಗಳು – ಅವರು ಕಂಡ ಇಂತಹ ನೋಟಗಳ ಒಂದು ಕೃತಿ. ನವಿರುಹಾಸ್ಯ, ಯಾರನ್ನೂ ನೋಯಿಸದ ಭಾವ, ವಸ್ತುನಿಷ್ಠತೆ, ಋಜುತ್ವದಂತಹ ಗುಣಗಳು ಕೃತಿಯುದ್ದಕ್ಕೂ ಕಾಣುತ್ತೇವೆ. ಲೇಖಕರು ತಮ್ಮ ಅನುಭವಕ್ಕೆ ಬಂದಿದ್ದನ್ನು ಅರ್ಥಪೂರ್ಣ ಸಾಹಿತ್ಯವಾಗಿ ರಚಿಸಿರುವ ಕೃತಿ.
ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...
READ MORE