ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ, ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಗುರುತಿಸಿಕೊಂಡ ಶ್ರೀ. ಗೀತಾ ನಾಗಭೂಷಣ್ ರವರು ಈ ಕೃತಿಯನ್ನು ರಚಿಸಿದ್ದಾರೆ. ಶತ ಶತಮಾನದಿಂದ ಮೇಲ್ವರ್ಗದ ಜನರ ಶೋಷಣೆಯಿಂದ ದಲಿತರ ಸಮಾಜದಲ್ಲಿ ಕಡೆಗಣಿಸಲ್ಪಟ್ಟಿದ್ದಾರೆ. ಮೇಲ್ವರ್ಗದವರು ದಲಿತರ ಮೇಲೆ ನಡೆಸುವ ದೌರ್ಜನ್ಯವನ್ನು , ಅಮಾಯಕರಾದ ದಲಿತರು ಮೇಲ್ವರ್ಗದ ಜನರಿಂದ ಅನುಭವಿಸುವ ಶೋಷಣೆಯನ್ನು , ಪಟ್ಟಾಭದ್ರ ಹಿತಾಶಕ್ತಿಗಳಿಂದ, ಪುರೋಹಿತ ಶಾಯಿಗಳಿಂದ ಶೋಷಣೆಗೆ ಒಳಪಟ್ಟ ದಲಿತರ,ದಮನಿತರ ಜೀನದ ನರಕವನ್ನು ಶ್ರೀ ಗೀತಾ ನಾವಭೂಷಣ್’ ರವರು ಈ ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯು ಗುಲ್ಬರ್ಗಾ ಜನರ ಆಡುನುಡಿಯಲ್ಲಿ ಮೂಡಿಬಂದಿದೆ.
ಕನ್ನಡದ ಲೇಖಕಿಯರಲ್ಲಿ ಒಬ್ಬರಾದ ಗೀತಾ ನಾಗಭೂಷಣ ಅವರು ತಮ್ಮ ಕಾದಂಬರಿ-ಕತೆಗಳ ಮೂಲಕ ಜನಪ್ರಿಯರಾದವರು. ಗುಲ್ಬರ್ಗದ ಬಡ ಕುಟುಂಬದಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಂದೆ ಶಾಂತಪ್ಪ-ತಾಯಿ ಶರಣಮ್ಮ. ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, ಸಂಜೆ ಕಾಲೇಜಿನಲ್ಲಿ ಓದಿ ಬಿಎಡ್ ಮತ್ತು ಎಂ.ಎ. ಪದವಿ ಗಳಿಸಿದರು. ಓದುವಾಗಲೇ ಉದ್ಯೋಗ ಮಾಡುತ್ತಿದ್ದ ಇವರು ಎಂ.ಎ. ಪದವಿ ಗಳಿಸಿದ ನಂತರ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು. ...
READ MORE