ಹದಿಹರೆಯ ವಯೋಮಾನದವರಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಅನೇಕ ಬದಲಾವಣೆಗಳು ಉಂಟಾಗುತ್ತವೆ. ಈ ಹಿನ್ನೆಲೆಯಲ್ಲಿ ಸಿಟ್ಟು, ಹಠಮಾರಿತನ, ಖಿನ್ನತೆ, ವ್ಯಕ್ತಿಪೂಜೆಯ ಪ್ರವೃತ್ತಿ, ದುಂದುವೆಚ್ಚ, ವಿನಾಶಕಾರಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು, ಲೈಂಗಿಕತೆ, ಧೂಮಪಾನ ಮತ್ತು ಮದ್ಯಪಾನದಂತಹ ಚಟಗಳಿಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಈ ಎಲ್ಲ ವಿಷಯಗಳ ಕುರಿತು ಚರ್ಚಿಸಿ, ಅದರಿಂದ ಹೊರ ಬರುವ ಸೂಕ್ತ ಮಾರ್ಗದರ್ಶನವನ್ನು ನೀಡಿದ್ದಾರೆ ಲೇಖಕ ಸಿ.ಆರ್. ಚಂದ್ರಶೇಖರ್.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE