ಹತ್ತರಲ್ಲೊಂದು ಮುತ್ತು

Author : ಹೆಚ್.ಜಿ. ರಾಧಾದೇವಿ

Pages 176

₹ 90.00




Year of Publication: 2012
Published by: ಶ್ರೀಲಕ್ಷ್ಮಿವೆಂಕಟೇಶ್ವರ ಪ್ರಕಾಶನ
Address: ನಂ.298, 6ನೇ ಕ್ರಾಸ್ ತ್ರಿವೇಣಿ ರಸ್ತೆ, ಯಶವಂತಪುರ, ಬೆಂಗಳೂರು -560022

Synopsys

ಹೆಚ್.ಜಿ.ರಾಧಾದೇವಿ ಕನ್ನಡದ ಜನಪ್ರಿಯ ಕಾದಂಬರಿಗಾರ್ತಿಗಳಲ್ಲಿ ಒಬ್ಬರು. ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಲೇ 150ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿರುತ್ತಾರೆ. ಇವರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ ಮತ್ತು ವಿಶ್ವೇಶ್ವರಯ್ಯ ಪ್ರಶಸ್ತಿಗಳು ದೊರೆತಿವೆ. ಇವರ ಎರಡು ಕೃತಿಗಳು ಅನುರಾಗ ಅರಳಿತು ಮತ್ತು ಸುವರ್ಣ ಸೇತುವೆ ಅದೇ ಹೆಸರುಗಳಲ್ಲಿ ಚಲನಚಿತ್ರಗಳಾಗಿವೆ. ಹತ್ತರಲ್ಲೊಂದು ಮುತ್ತು -ಹೆಚ್.ಜಿ.ರಾಧಾದೇವಿ. ಈ ಕಾದಂಬರಿಯಲ್ಲಿ ಎರಡು ಕಥೆಗಳು ಅಡಗಿವೆ. ಮೊದಲನೆಯದು" ಹತ್ತರಲ್ಲೊಂದು ಮುತ್ತು " ಮತ್ತು ಎರಡನೆಯದು "ಆಸೆಯ ಅರಮನೆ".

About the Author

ಹೆಚ್.ಜಿ. ರಾಧಾದೇವಿ
(30 January 1952 - 09 November 2006)

ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.  ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ  ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...

READ MORE

Related Books