ಹಿರಿಯ ಲೇಖಕ ಡಾ. ಎಸ್.ಪಿ. ಪದ್ಮಪ್ರಸಾದ್ ಅವರು ಬರೆದ ಕೃತಿ-ಹೀಗೆ ನಮ್ಮ ಹಂಪನಾ. ಕನ್ನಡ ಸಾಹಿತ್ಯ ಸಂಶೋಧನೆ ಸೇರಿದಂತೆ ಸಾಹಿತ್ಯದ ವಿವಿಧ ವಲಯಗಳಲ್ಲಿ ಕೃಷಿ ಮಾಡಿರುವ ಡಾ. ಹಂಪ ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ವಲಯದಲ್ಲಿ ಚಿರಪರಿಚಿತರು. ಹಳೆಗನ್ನಡ ಸಾಹಿತ್ಯ ವಿಶೇಷವಾಗಿ ಜೈನ ಸಾಹಿತ್ಯದಲ್ಲಿ ವಿಶೇಷ ಕೃಷಿ ಇವರದ್ದು. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಗ್ರಾಮದವರು. ಭಾಷೆ, ಸಾಹಿತ್ಯ, ವಿಮರ್ಶೆ, ಸಂಶೋಧನೆ, ಸಂಪಾದನೆ ಹೀಗೆ ವಿಸ್ತೃತವಾಗಿ ಕೆಲಸ ಮಾಡಿದ್ದು, ನೂರಾರು ಪ್ರಶಸ್ತಿ-ಗೌರವಗಳು ಲಭಿಸಿವೆ. ‘ಹಂಪನಾ’ ಎಂದೇ ಕನ್ನಡ ಸಾರಸ್ವತ ಲೋಕದಲ್ಲಿ ಚಿರಪರಿಚಿತರಾದ ಅವರ ಜೀವನ ಸಾಧನೆ ಕುರಿತ ಗ್ರಂಥವಿದು.
ಎಸ್.ಪಿ. ಪದ್ಮಪ್ರಸಾದ್ ಜಾನಪದ, ಕಾವ್ಯ, ನಾಟಕ, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮ ಪ್ರಸಾದವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ. ತಂದೆ ಎಸ್.ಪಿ. ಪಾಯಪ್ಪಶೆಟ್ಟಿ, ತಾಯಿ ಜಿನ್ನಮ್ಮ. ಪ್ರಾರಂಭಿಕ ಶಿಕ್ಷಣ ಹೊಸನಗರದಲ್ಲಿ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಿಂದ ಬಿ.ಎಸ್ಸಿ ಪದವಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನಿಂದ ಬಿ.ಇಡಿ. ಪದವಿಯನ್ನೂ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಹಾಗೂ ‘‘ಜೈನ ಜನಪದ ಸಾಹಿತ್ಯ-ಸಂಪಾದನೆ ಹಾಗೂ ಅಧ್ಯಯನ’’ ಪ್ರಬಂದ ಮಂಡಿಸಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಹೈಸ್ಕೂಲು ಅಧ್ಯಾಪಕರಾಗಿ ಪಿಎಚ್.ಡಿ. ಪದವಿಗಳಿಸಿದ ರಾಜ್ಯದ ಮೊದಲ ವ್ಯಕ್ತಿ ...
READ MORE