ಖ್ಯಾತ ಅನುವಾದಕ-ಲೇಖಕ ಡಿ.ಎನ್. ಶ್ರೀನಾಥ ಅವರ ಕೃತಿ-ಹೀರಾಲಾಲನ ಭೂತ ಮತ್ತು ಇನ್ನಿತರ ಭಾರತೀಯ ಕಥೆಗಳು. ಭಾರತದ ಪ್ರಮುಖ 21 ಭಾಷೆಗಳ ಉತ್ತಮ ಕಥೆಗಳನ್ನು ಆಯ್ದು ಕನ್ನಡಕ್ಕೆ ಅನುವಾದಿಸಿದ ಕೃತಿ ಇದು. ಭಾರತವು ವಿಭಿನ್ನ ಸಾಂಸ್ಕೃತಿ ಹಿನ್ನೆಲೆ ಹೊಂದಿದ್ದು, ಇಲ್ಲಿಯ ಕಥೆಗಳು ಭಾರತೀಯ ಸಂಸ್ಕತಿಯ ವೈವಿಧ್ಯತೆಯನ್ನು ತೋರುತ್ತವೆ. ಮತ್ತು, ಇದೇ ಅಂಶವು ಕಥೆಗಳ ಜೀವಾಳವಾಗಿ, ಭಾರತೀಯ ಉತ್ತನ ಸಂಸ್ಕೃತಿಯನ್ನು ಮನದಟ್ಟು ಮಾಡಿಸುತ್ತವೆ.
ಅನುವಾದಕ ಶ್ರೀನಾಥ್ ಅವರು ಹುಟ್ಟಿದ್ದು 1950 ಡಿಸೆಂಬರ್ 3ರಂದು. ಮೂಲತಃ ಶಿವಮೊಗ್ಗದವರು. ತಂದೆ ಡಿ.ನಾರಾಯಣ ರಾವ್, ತಾಯಿ ಗುಂಡಮ್ಮ. ಹುಟ್ಟೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದು, ಧಾರವಾಡದ ಮುಕ್ತ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ನಂತರ ಶಾರದಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ನಿವೃತ್ತರಾದರು. ಸಾಹಿತ್ಯದೆಡೆಗಿನ ಒಲವು ಅನುವಾದದತ್ತ ಲೇಖಕರನ್ನು ಸೆಳೆಯಿತು. 18ನೇ ವಯಸ್ಸಿನಲ್ಲಿಯೇ "ಶಿಶಿರ" ಕೃತಿಯನ್ನು ಅನುವಾದ ಮಾಡಿದರು. ಹಿಂದಿ ಮಾತ್ರವಲ್ಲದೇ ಬಂಗಾಳಿ ಭಾಷೆ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಪ್ರಮುಖ ಅನುವಾದಿತ ಕೃತಿಗಳೆಂದರೆ; ಸೂತ್ರದ ...
READ MORE