ಹೆಣ್ಣು-ಸಂಕರ ಕಾಲದ ಆತ್ಮಪ್ರಜ್ಞೆ

Author : ಎಚ್.ಎಸ್. ಅನುಪಮಾ

Pages 158

₹ 130.00




Year of Publication: 2013
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಲೇಖಕಿ ಡಾ. ಎಚ್. ಎಸ್, ಅನುಪಮಾ ಅವರ ಕೃತಿ ’ಹೆಣ್ಣು ಸಂಕರ ಕಾಲದ ಆತ್ಮಕತೆ’. ಮಹಿಳಾ ಲೇಖನಗಳನ್ನೊಳಗೊಂಡ ಈ ಕೃತಿಯು ಸ್ತ್ರೀವಾದಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. 

ಉಸಿರುಗಟ್ಟಿಸುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಿಲ್ಲದ ವರ್ಗವನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ ಎಂದು ಹೇಳಬಹುದಾದ ಅಂಶವನ್ನು ಬಹು ಚರ್ಚಿತವಾಗಿ ಈ ಕೃತಿ ಅವಲೋಕಿಸುತ್ತದೆ. 

ಸಮಾಜ ಮಹಿಳೆಯನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ ಎನ್ನುವ ಹಿನ್ನೆಲೆಯಲ್ಲಿ ಚರ್ಚೆಗೊಳಗಾಗುವ ಅಂಶವನ್ನೂ ಮತ್ತು  ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ - ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಳು ಎಂಬುದನ್ನೂ,  ನಾಗರಿಕ ಸಮಾಜ ಬೇರೆಬೇರೆ ಕಾರಣಗಳಿಗಾಗಿ ರೂಪಿಸಿಕೊಂಡಿರುವ ಸೈನ್ಯ/ಪೊಲೀಸ್ ಮತ್ತಿತರ ರಕ್ಷಣಾ ವ್ಯವಸ್ಥೆಗಳು ಮಹಿಳೆಯರನ್ನು ಅತ್ಯಂತ ಕೀಳಾಗಿ ನಡೆಸಿಕೊಳ್ಳುತ್ತಿವೆ ಎಂಬ ವಿರೋಧ ವ್ಯಕ್ತಪಡಿಸುವ ದನಿಯನ್ನೂ,  ರಕ್ಷಕ ವ್ಯವಸ್ಥೆಯೇ ಮಹಿಳಾ ವಿರೋಧಿ ವ್ಯವಸ್ಥೆಯಾಗಿ ಮಾರ್ಪಟ್ಟಿರುವುದು ನಾಗರಿಕ ಸಮಾಜದ ವಿಪರ್ಯಾಸ ಹೇಗೆ ಆಗಿದೆ ಎಂಬುದನ್ನು ಸೂಕ್ಷ್ಮವಾಗಿ, ಮತ್ತು ಸ್ಥೂಲವಾಗಿ ತೆರೆದಿಡುವ ಕೃತಿ ಇದಾಗಿದೆ.

About the Author

ಎಚ್.ಎಸ್. ಅನುಪಮಾ

ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು  ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...

READ MORE

Related Books