ಲೇಖಕಿ ರೂಪ ಹಾಸನ ಅವರ ಸಂಪಾದಿತ ಕೃತಿ-ಹೆಣ್ಣುಸಿರ ತಲ್ಲಣಗಳು. ಹೆಣ್ಣಿನ ಶೋಷಣೆಗಳ ವಿವಿಧ ಆಯಾಮಗಳನ್ನು ಚಿತ್ರಿಸುವ ಬರಹಗಳು ಇಲ್ಲಿ ಸಂಕಲನಗೊಂಡಿವೆ. ಮಹಿಳೆಯರು ಪುರುಷರಿಗೆ ಸರಿಸಮಾನರು ಎಂದು ಹೇಳುತ್ತಿದ್ದರೂ ಸ್ತ್ರೀ-ಪುರುಷರ ಮಧ್ಯೆ ಮೇಲು-ಕೀಳರಿಮೆಯ ತಾರತಮ್ಯ ಮುಂದುವರಿದಿದೆ. ವಿದ್ಯಾವಂತ ಸಮೂಹವೂ ಇದಕ್ಕೆ ಹೊರತಲ್ಲ. ಮಹಿಳೆಯರನ್ನು ಮಹಿಳೆಯರೇ ಶೋಷಿಸುವ ಹಕೀಕತ್ತು ಒಂದೆಡೆ ಇದೆ. ಮಹಿಳಾ ಮೀಸಲಾತಿ ಹೆಸರಿನಲ್ಲಿ ಮಹಿಳೆಯರನ್ನು ದಮನಿಸುವ ವ್ಯವಸ್ಥಿತ ಜಾಲವೂ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ಇಂತಹ ಹುನ್ನಾರಗಳನ್ನು ಬಯಲಿಗೆಳೆಯುವ ವಿವಿಧ ಲೇಖಕರ ಬರಹಗಳು ಇಲ್ಲಿ ಸಂಕಲನಗೊಂಡಿವೆ.
ರೂಪ ಹಾಸನ ಅವರು ಮೂಲತಃ ಮೈಸೂರಿನವರು. ಕಾವ್ಯ ಮತ್ತು ರೇಖಾಚಿತ್ರ ಪ್ರಮುಖ ಅಭಿವ್ಯಕ್ತಿ ಮಾಧ್ಯಮ. ಗಳಿಗೆ ಬಟ್ಟಲ ತಿರುವುಗಳಲ್ಲಿ (ಕಿರುಪದ್ಯಗಳ ಸಂಕಲನ) , ಕಡಲಿಗೆಷ್ಟೊಂದು ಬಾಗಿಲು, ಲಹರಿ , ಮಹಿಳೆ ಮತ್ತುಆಧುನಿಕತೆಯ ಸವಾಲುಗಳು, ಹೇಮಯೊಡಲಲ್ಲಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಡಾ. ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ 2000, ಶಿವಮೊಗ್ಗದ ಕರ್ನಾಟಕ ಸಂಘ, ನೀಲಗಂಗಾದತ್ತಿ ಪ್ರಶಸ್ತಿ 2010, ಕನ್ನಡ ಸಾಹಿತ್ಯ ಪರಿಷತ್ತು. ಮೃತ್ಯುಂಜಯ ಸಾರಂಗಮಠ ಪ್ರಶಸ್ತಿ 2000, ಹರಿಹರ ಶ್ರೀ ಪ್ರಶಸ್ತಿ 2010, ಸೇಡಂನ ಅಮ್ಮ ಪ್ರಶಸ್ತಿ 2010, ಡಿ.ವಿ.ಜಿ. ಸಾಹಿತ್ಯ ಪ್ರಶಸ್ತಿ 2001, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ 2001, ...
READ MORE