ಶ್ರೀದೇವಿ ಕೆರೆಮನೆ ಅವರ ಅಂಕಣ ಬರಹಗಳ ಸಂಗ್ರಹ ಹೆಣ್ತನದ ಆಚೆ-ಈಚೆ’. ಕವಯತ್ರಿಯಾಗಿ ಗಮನ ಸೆಳೆದಿರುವ ಅವರು ತಮ್ಮ ಕೃತಿಯಲ್ಲಿ ಹೆಣ್ಣನ್ನು ಪ್ರಧಾನವಾಗಿ ಧ್ಯಾನಿಸಿದ್ದಾರೆ. ಗಾತ್ರದಲ್ಲಿ ಚಿಕ್ಕದಾದರೂ ಪರಿಣಾಮಕಾರಿ ಬರೆಹಗಳು ಎಂದು ಮೆಚ್ಚುಗೆಗೆ ಪಾತ್ರವಾಗಿರುವ ಇವು ಪುರುಷ ಪ್ರಧಾನ ವ್ಯವಸ್ಥೆ ಹೇಗೆ ಹೆಣ್ಣನ್ನು ಹೆಜ್ಜೆ ಹೆಜ್ಜೆಗೂ ನಿಯಂತ್ರಿಸುತ್ತವೆ ಎಂಬುದನ್ನು ತಿಳಿಸುತ್ತವೆ.
ಉತ್ತರ ಕನ್ನಡ ಜಿಲ್ಲೆ ಹಿರೇಗುತ್ತಿ ಮೂಲದ ಶ್ರೀದೇವಿ ಕೆರೆಮನೆ ವೃತ್ತಿಯಿಂದ ಪ್ರೌಢಶಾಲಾ ಶಿಕ್ಷಕಿ. ಸಾಹಿತ್ಯ ರಚನೆ ಹವ್ಯಾಸ. ಮೊದಲ ಕವನ ಸಂಕಲನ ’ನಾನು ಗೆಲ್ಲುತ್ತೇನೆ’. ಬಳಿಕ ’ಗೆಜ್ಜೆ ಕಟ್ಟದ ಕಾಲಲ್ಲಿ’,’ಮೌನದ ಮಹಾ ಕೋಟೆಯೊಳಗೆ’, ’ಮೈ ಮುಚ್ಚಲೊಂದು ತುಮಡು ಬಟ್ಟೆ’, ಕೃತಿಗಳು ಬಂದವು. ಅಂಗೈಯೊಳಗಿನ ಬೆಳಕು(ವಿಮರ್ಶಾ ಸಂಕಲನ), ’ಅಲೆಯೊಳಗಿನ ಮೌನ’, ’ನನ್ನ ದನಿಗೆ ನಿನ್ನ ದನಿಯು’ ಗಜಲ್ ಕೃತಿ. ’ಬೈಟೂ’ ಚಹಾ ಕುರಿತ ಸಂಕಲನವಾದರೆ ಬಿಕ್ಕೆಹಣ್ಣು, ಚಿತ್ತ ಚಿತ್ತಾರ ಅವರ ಕತೆಗಳ ಗುಚ್ಛ. ಗೂಡು ಕಟ್ಟುವ ಸಂಭ್ರಮದಲ್ಲಿ (ಪ್ರಬಂಧ ಬರಹ ಸಂಕಲನ). ’ಪ್ರೀತಿ ಎಂದರೆ ಇದೇನಾ?, ಹೆಣ್ತನದ ಆಚೆ ...
READ MORE