ಲೇಖಕ ಗಿರಡ್ಡಿ ಗೋವಿಂದರಾಜ ಅವರ ಲಲಿತ ಪ್ರಬಂಧಗಳ ಕೃತಿ ʻಹಿಡಿಯದ ಹಾದಿʼ. ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು, ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿಇದೆ.
ಖ್ಯಾತ ವಿಮರ್ಶಕ ಗಿರಡ್ಡಿ ಗೋವಿಂದರಾಜ ಅವರು ಮೂಲತಃ ಧಾರವಾಡ ಜಿಲ್ಲೆಯ ಅಬ್ಬಿಗೇರಿಯವರು. ತಂದೆ ಅಂದಾನಪ್ಪ ಮತ್ತು ತಾಯಿ ನಾಗಮ್ಮ. ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸಣ್ಣಕತೆ-ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್, ಬೆಲ್ಸಿಯಂ, ಫ್ರಾನ್ಸ್, ಸರೆಂಡ್, ಇಟಲಿಗಳಲ್ಲಿ ಉಪನ್ಯಾಸ ನೀಡಿರುವ ಅವರು ಇಂಗ್ಲಿಷ್ ಸ್ಟಡೀಸ್ ನಲ್ಲಿ ಡಿಪ್ಲಮೊ ಪಡೆದು ಕಲಬುರ್ಗಿಯ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡಿಗೆ ಭಾಷಾ ವಿಜ್ಞಾನದಲ್ಲಿ ವಿಶೇಷ ಅಧ್ಯಯನ ನಡೆಸಿದರು. ಅವರು ಹೈಸ್ಕೂಲಿನಲ್ಲಿರುವಾಗಲೇ 'ಶಾರದಾಲಹರಿ' ಎಂಬ ನೀಳ್ಗವಿತೆ ಪ್ರಕಟಿಸಿದ್ದರು. ನಾಟಕ ಅಕಾಡೆಮಿಯ ಫೆಲೋಶಿಪ್ ದೊರೆತಿರುವ ...
READ MORE