ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದ ಸಾಹಿತ್ಯ ಮಾಲಿಕೆಯಲ್ಲಿ ಬಂದ ಕಥಾ ಸಂಕಲನ ಶೈಲಜಾ ಹಾಸನ ಅವರ ಹಿಂದಿನ ಬೆಂಚಿನ ಹುಡುಗಿಯರು. ಕೃತಿಯಲ್ಲಿ ಸಾಬು, ಮೌನ ಮನದ ವೀಣೆ , ಹಿಂದಿನ ಬೆಂಚಿನ ಹುಡುಗಿಯರು, ಎಲ್ಡು ಕೊಡ ನೀರು, ತುಮುಲ ಅಮ್ಮ, ವಿಪರ್ಯಾಸ,ದಾರಿ ಯಾವುದಯ್ಯ, ಚಂದೂ ಮಾಮ, ಆಳ ಹೀಗೆ ಎಲ್ಲ ಕತೆಗಳಲ್ಲೂ ವಾಸ್ತವಗಳನ್ನು ಬಹಳ ಚೆನ್ನಾಗಿ ತೆರೆದಿಟ್ಟಿದ್ದಾರೆ. ನಮ್ಮ ಸುತ್ತಮುತ್ತಲಿನ ಆಗು ಹೋಗುಗಳನ್ನು ಒಳಗೊಂಡಿರುವಂತಹ ಸುಂದರ ಕಥಾಸಂಕಲನ- "ಹಿಂದಿನ ಬೆಂಚಿನ ಹುಡುಗಿಯರು". ಇಲ್ಲಿನ ಪ್ರತಿಯೊಂದು ಬರಹವೂ, ಕಥೆಯೂ ಬಹಳ ಸರಳವಾಗಿದೆ ಹಾಗೂ ಓದುಗರ ಮನಸ್ಸನ್ನು ತಟ್ಟುವಂತಿದೆ.
ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಎನ್. ಶೈಲಜಾ ಮೂಲತಃ ಹಾಸನದವರು. ಅವರ ಅನೇಕ ಕಾದಂಬರಿಗಳು ಸುಧಾ, ತರಂಗ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಸಾರವಾಗಿ ಓದುಗರನ್ನು ತಲುಪಿ ಅಪಾರ ಮೆಚ್ಚುಗೆ ಪಡೆದಿವೆ. ಎಂ.ಎ. ಬಿಎಡ್.ಪದವಿ ಪಡೆದ ಇವರು ಶಾಂತಿಗ್ರಾಮ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಥಾ ಸಂಕಲನ,ಕಾದಂಬರಿ,ಲೇಖನಗಳ ಸಂಕಲನ,ಕವನ ಸಂಕಲನ ,ಪ್ರಬಂಧ ಸಂಕಲನ ಹೀಗೆ ಒಟ್ಟು 20 ಕೃತಿಗಳು ಪುಸ್ತಕ ರೂಪದಲ್ಲಿ ಹೊರಬಂದಿದೆ.ಅನೇಕ ಪ್ರಶಸ್ತಿ ಪುರಸ್ಕಾರಗಳು ಈ ಕೃತಿಗಳಿಗೆ ಲಭಿಸಿದೆ.ಇವರ ಸಾಹಿತ್ಯ ಸಮಾಜಮುಖಿಯಾಗಿದ್ದು, ಸಾಮಾಜಿಕ ಸಮಸ್ಯೆಗಳಾದ ವೃದ್ಯಾಪ್ಯ, ವೃದ್ಧಾಶ್ರಮ, ರೈತರ ಆತ್ಮಹತ್ಯೆ, ಅದಕ್ಕೆ ಪರಿಹಾರ,ಸಾವಯುವ ಕೃಷಿ ,ಅದರ ಮಹತ್ವ,ಶಿಕ್ಷಣದ ಜೊತೆಗೆ ವೃತ್ತಿ ಕೌಶಲ ಹದಿಹರೆಯದ ಮಕ್ಕಳ ...
READ MORE