ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ’ಹಿಂದೂ ಧರ್ಮದ ತತ್ವ’ದ ಕುರಿತ ಪುಸ್ತಕವನ್ನು ಸುರೇಶ ಭಟ್ ಬಾಕ್ರಬೈಲ್ ಅವರು ಅನುವಾದಿಸಿದ್ದಾರೆ. ಹಿಂದೂ ಆಗಿ ಹುಟ್ಟಿರುವೆ ಹಿಂದೂ ಆಗಿ ಸಾಯಲಾರೆ ಎಂದು ಹೇಳಿದ ಅಂಬೇಡ್ಕರ್ ಅವರು ತಮ್ಮ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಹಿಂದೂ ಧರ್ಮ ತಾತ್ವಿಕತೆ- ಅದರ ಸ್ವರೂಪವನ್ನು ಕುರಿತ ವಿಶಿಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಅವರ ವಿಚಾರ ಧಾರೆಯನ್ನು ಸರಳವಾದ ಕನ್ನಡದಲ್ಲಿ ನೀಡಲಾಗಿದೆ.
ಮಂಗಳೂರಿನವರಾದ ಸುರೇಶ ಭಟ್ ಬಾಕ್ರಬೈಲ್ ಅವರು ಸುರತ್ಕಲ್ ನ ಕೆ.ಆರ್.ಇ.ಸಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದವರು. ಮುಂಬಯಿಯಲ್ಲಿ ವಾಣಿಜ್ಯ ನೌಕೆ, ನೌಕಾ ನಿರ್ಮಾಣ, ಡೀಸಲ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅವರು 2006ರಲ್ಲಿ ನಿವೃತ್ತರಾದರು. ನಿವೃತ್ತರಾದ ನಂತರ ಅವರು ಬರಹ ಹಾಗೂ ಮಾನವ ಹಕ್ಕು, ಕೋಮು ಸೌಹಾರ್ದ ಚಳವಳಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಕಾಲೀನ ವಿಷಯಗಳ ಬಗ್ಗೆ ಬರೆಯುವದರ ಜೊತೆಗೆ ಕೋಮುವಾದದ ವಿರುದ್ಧ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಕೇಸರಿ ಭಯೋತ್ಪಾದನೆ, ಮಂಕು ಬೂ(ಮೋ)ದಿ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಕರ್ಕರೆಯನ್ನು ಕೊಂದವರು ಯಾರು?, ಜೈಲಿನ ...
READ MORE