ಡಾ. ಬಿ.ಆರ್. ಅಂಬೇಡ್ಕರ್ ಅವರು ಹಿಂದೂ ಧರ್ಮದ ತತ್ವ ಕುರಿತು ಬರೆದ ಕೃತಿಯನ್ನು ಲೇಖಕ ಸುರೇಶ ಭಟ್ ಬಾಕ್ರಬೈಲ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಹಿಂದೂ ಧರ್ಮದ ತತ್ವಗಳನ್ನು ಮಾನವ ವಿರೋಧಿ ಅಂಶಗಳನ್ನು ಚರ್ಚಿಸಿದ್ದು, ಹಿಂದೂ ಎಂಬುದು ಒಂದು ಧರ್ಮ ಅಲ್ಲವೇ ಅಲ್ಲ ಎಂಬಷ್ಟು ಪ್ರಖರವಾದ ಚಿಂತನೆಗಳು ಈ ಕೃತಿಯಲ್ಲಿ ಒಳಗೊಂಡಿವೆ.
ಮಂಗಳೂರಿನವರಾದ ಸುರೇಶ ಭಟ್ ಬಾಕ್ರಬೈಲ್ ಅವರು ಸುರತ್ಕಲ್ ನ ಕೆ.ಆರ್.ಇ.ಸಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದವರು. ಮುಂಬಯಿಯಲ್ಲಿ ವಾಣಿಜ್ಯ ನೌಕೆ, ನೌಕಾ ನಿರ್ಮಾಣ, ಡೀಸಲ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅವರು 2006ರಲ್ಲಿ ನಿವೃತ್ತರಾದರು. ನಿವೃತ್ತರಾದ ನಂತರ ಅವರು ಬರಹ ಹಾಗೂ ಮಾನವ ಹಕ್ಕು, ಕೋಮು ಸೌಹಾರ್ದ ಚಳವಳಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಕಾಲೀನ ವಿಷಯಗಳ ಬಗ್ಗೆ ಬರೆಯುವದರ ಜೊತೆಗೆ ಕೋಮುವಾದದ ವಿರುದ್ಧ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಕೇಸರಿ ಭಯೋತ್ಪಾದನೆ, ಮಂಕು ಬೂ(ಮೋ)ದಿ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಕರ್ಕರೆಯನ್ನು ಕೊಂದವರು ಯಾರು?, ಜೈಲಿನ ...
READ MORE