ಹೊನ್ನಾವರಿಕೆ

Author : ಎಂ.ಆರ್. ಕಮಲ

Pages 176

₹ 175.00




Year of Publication: 2022
Published by: ಹರಿವು ಬುಕ್ಸ್
Address: #67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿ.ವಿ.ಜಿ ರಸ್ತೆ, ನಾಗಸಂದ್ರ ಸರ್ಕಲ್ ಹತ್ತಿರ, ಬಸವನಗುಡಿ, ಬೆಂಗಳೂರು - 560004
Phone: 8088822171

Synopsys

ಲೇಖಕಿ ಎಂ.ಆರ್‌. ಕಮಲ ಅವರ ಪ್ರಬಂಧ ಸಂಕಲನ “ಹೊನ್ನಾವರಿಕೆ” ಅವರ ಈ ಹಿಂದಿನ ಗದ್ಯ ಬರಹಗಳಂತೆಯೇ ಸರಳ ಮತ್ತು ನೇರ ನಿರೂಪಣೆ ಈ ಪ್ರಬಂಧಗಳಲ್ಲಿಯೂ ವಿಸ್ತಾರಗೊಂಡಿದೆ. ಈ ಅಂಶಗಳೇ ಅವರಿಗೆ ತಮ್ಮದೇ ಓದುಗ ವರ್ಗವನ್ನು ಸೃಷ್ಟಿಸಿಕೊಟ್ಟಿವೆ. ಮನುಷ್ಯನ ಖಾಸಗಿ ಬದುಕಿನ ಅನುಭವಗಳು ಲೋಕಾನುಭವವಾಗಿ ಬದಲಾದಾಗ ಅರಿವೇ ಆಗದೆ ಓದುಗನ ಮನಸ್ಸನ್ನು ವ್ಯಾಪಿಸಬಲ್ಲವು. ಇಲ್ಲಿ ಹೇಳುತ್ತಿರುವ ಸಂಗತಿ, ಪ್ರಸಂಗ, ಅನುಭವಗಳು ನಮಗೂ ಆಗಿವೆಯಲ್ಲ ಎಂಬ ಅಚ್ಚರಿಯಲ್ಲಿ ಓದುಗ ಅದರಲ್ಲಿ ತಲ್ಲೀನನಾಗಬಲ್ಲ ಗುಣವನ್ನು ಈ ಪ್ರಬಂಧಗಳು ಪಡೆದಿವೆ. ಬದುಕಿನ ಸಾಮಾನ್ಯ ಸಂಗತಿಗಳಿಗೂ ಅದರದೇ ಆದ ಚೆಲುವು ಇರುತ್ತದೆಂಬ ಅರಿವನ್ನು ಈ ಬರಹಗಳು ಮೂಡಿಸುತ್ತವೆ.

About the Author

ಎಂ.ಆರ್. ಕಮಲ
(27 March 1959)

ಕವಿ-ಅನುವಾದಕಿಯಾಗಿ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಎಂ.ಆರ್. ಕಮಲಾ ಅವರು ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಮೇಟಿಕುರ್ಕೆಯವರು. 1959ರ ಮಾರ್ಚ್‌ 27ರಂದು ಜನಿಸಿದರು. ತಂದೆ ಎಂ.ಎಚ್. ರಾಮಸ್ವಾಮಿ, ತಾಯಿ ವಿಶಾಲಾಕ್ಷಿ. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಮತ್ತು ಎಲ್.ಎಲ್.ಬಿ. ಪದವಿ, ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಾಶ್ಚಿಮಾತ್ಯ ಸಾಹಿತ್ಯ ಅಧ್ಯಯನಕ್ಕಾಗಿ ಬಿಎಂಶ್ರೀ ಚಿನ್ನದ ಪದಕ ವಿಜೇತರು.  ಫ್ರೆಂಚ್ ಭಾಷೆಯಲ್ಲಿ ಪದವೀಧರರು. ಶಕುಂತಲೋಪಾಖ್ಯಾನ (1988), ಜಾಣೆ ಮತ್ತು ಇತರ ಕವಿತೆಗಳು (1992), ಹೂವು ಚೆಲ್ಲಿದ ಹಾದಿ (2007), ಮಾರಿಬಿಡಿ (2017) ಕವನ ಸಂಕಲನಗಳು. ಆಫ್ರಿಕನ್-ಅಮೆರಿಕನ್ ಮತ್ತು ಅರಬ್ ಮಹಿಳಾ ಕಾವ್ಯದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. ’ಕತ್ತಲ ಹೂವಿನ ಹಾಡು (1989) ...

READ MORE

Related Books