ವಿಜಯ ಕರ್ನಾಟಕದಲ್ಲಿ ಅಂಕಣದಲ್ಲಿ ಪ್ರಕಟವಾದ ಎಸ್.ಆರ್. ವಿಜಯ ಶಂಕರ ಅವರ ಸಾಂಸ್ಕೃತಿಕ ಲೇಖನಗಳ ಸಂಗ್ರಹ ’ಹೂ ಬೆರಳು’. ಸಾಹಿತ್ಯ, ಸಂಸ್ಕೃತಿ, ಸಾಮಾಜಿಕ ತಲ್ಲಣಗಳ ಕುರಿತ ವಿಷಯಗಳು,ಅಭಿಪ್ರಾಯಗಳು ಸಂಕಲನಗಳಲ್ಲಿ ಒಳಗೊಂಡಿವೆ. ಪ್ರಜಾಪ್ರಭುತ್ವ, ಸಿದ್ಧಾಂತ, ಸರ್ವಾಧಿಕಾರತ್ವ ಹೀಗೆ ಹಲವಾರು ಪ್ರಮುಖ ವಿಷಯಗಳ ಕುರಿತ ವಿಶ್ಲೇಷಣೆ ಇಲ್ಲಿನ ಬರಹಗಳಲ್ಲಿದೆ.
ಎಸ್. ಆರ್. ವಿಜಯಶಂಕರ್ ಒಬ್ಬ ವಿಮರ್ಶಕರು. ಬೆಂಗಳೂರಿನಲ್ಲಿ ವಾಸವಿರುವ ಅವರು, ಸಾಹಿತ್ಯ , ಸಂಸ್ಕೃತಿ, ವಿಮರ್ಶಾ ಬರಹಗಳಿಂದ ಕನ್ನಡ ಓದುಗರಿಗೆ ಪರಿಚಿತರಾಗಿದ್ದಾರೆ. ಇಂಟೆಲ್ ಟೆಕ್ನಾಲಜಿ ಯಲ್ಲಿ ದಕ್ಷಿಣ ಏಷ್ಯಾದ ಸಂವಹನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು, ಜನಪ್ರಿಯ ನಿಯತಕಾಲಿಕೆಗಳಲ್ಲಿ ಲೇಖನಗಳನ್ನೂ ಅಂಕಣಗಳನ್ನೂ ಬರೆಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರು ತಮ್ಮ ಹೆಚಿನ ಬರಹಗಳನ್ನು ಸಾಹಿತ್ಯಿಕ ಕಿರುಪತ್ರಿಕೆಯಲ್ಲಿ ಪ್ರಕಟಿಸುತ್ತಿದ್ದಾರೆ. ಹಿಂದಿನ ಕೃತಿಗಳ ಮರು ಓದುಗರಿಗೆ ಗಮನ ಕೊಡುತ್ತಿರುವ ವಿಜಯ ಶಂಕರ್, ಕವಿ ಗೋಪಾಲಕೃಷ್ಣ ಅಡಿಗರ ಮರು ಓದಿನ 'ಪ್ರತಿಮಾ ಲೋಕ', ಕೃತಿಯನ್ನು ಸಂಪಾದಿಸಿದ್ದಾರೆ. ...
READ MORE