ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಅವರ ಕೃತಿ-ಹೊಸ ಬೆಳಕಿನಲ್ಲಿ. ಈ ಕೃತಿಯು ಚಿದಾನಂದಮೂರ್ತಿ ಅವರ ಎಂಟು ಆಯ್ದ ಕೃತಿಗಳನ್ನು ಒಳಗೊಂಡಿದೆ. ಹೀಗಾಗಿ, ಅವರ ಸಮಗ್ರ ಸಾಹಿತ್ಯದ ಒಂದು ಹೊರಳು ನೋಟ ಎನ್ನಬಹುದು. ಸಂಶೋಧಕ ಚಿದಾನಂದಮೂರ್ತಿ ಅವರ ಸಂಶೋಧನೆಯ ಆಳ, ಅಧ್ಯಯನದ ವಿಸ್ತಾರವನ್ನು ಇಲ್ಲಿ ಕಂಡುಕೊಳ್ಳಬಹುದು.
ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್‍ಯಾಂಕ್‌ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...
READ MORE