ಲೇಖಕ ನಾ. ದಿವಾಕರ ಅವರ ಕೃತಿ-ಅಂಬೇಡ್ಕರ್ ದೃಷ್ಟಿಕೋನ ಹೊಸ ದಲಿತ ಚಳವಳಿಗಳು. ದಲಿತ ಚಳವಳಿಗಳು ಅಂಬೇಡ್ಕರ್ ದೃಷ್ಟಿಯಲ್ಲಿ ಕ್ರಾಂತಿಕಾರಕ ಹೆಜ್ಜೆಗಳು. ಶತಶತಮಾನದ ಶೋಷಣೆಯನ್ನು ಶಾಶ್ವತವಾಗಿ ಕೊನೆಗಾಣಿಸುವ ಅಸ್ತ್ರಗಳು. ಅಂಬೇಡ್ಕರ್ ದೃಷ್ಟಿಯಲ್ಲಿ ದಲಿತ ಚಳವಳಿಗಳು ಇತಹಾಸದ ಸಿಟ್ಟಿನಿಂದ ತುಂಬಿರಬೇಕು. ಆದರೆ, ಹೋರಾಟದ ಹಾದಿಯಲ್ಲಿ ಅದು ಅವರಿಗೆ ನಿರಾಶೆಯನ್ನುಂಟು ಮಾಡಿದವು. ಈ ಕುರಿತು ಅವರು ಬರೆದ ವಿಚಾರಗಳ ಈ ಕೃತಿಯನ್ನು ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ.
ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...
READ MORE