ಹೊಸಗನ್ನಡ ಸಾಹಿತ್ಯ ಚರಿತ್ರೆ

Author : ಎಲ್.ಎಸ್. ಶೇಷಗಿರಿರಾವ್

Pages 352

₹ 195.00




Published by: ಅಂಕಿತ ಪುಸ್ತಕ
Address: (ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು), 53, ಗಾಂಧಿಬಜಾರ್‍ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560 004
Phone: 08026617100

Synopsys

ಎಲ್.ಎಸ್.ಶೇಷಗಿರಿರಾವ್ ಅವರ ಕೃತಿ ‘ಹೊಸಗನ್ನಡ ಸಾಹಿತ್ಯ ಚರಿತ್ರೆ’. ಡಾ|| ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಹೇಳುವಂತೆ, "ಈ ಶತಮಾನದಲ್ಲಿ ಕನ್ನಡ ಸಾಹಿತ್ಯ ವೈವಿಧ್ಯಮಯವಾಗಿ, ಸಮೃದ್ಧವಾಗಿ ಬೆಳೆದಿದೆ. ಕನ್ನಡ ಸಾಹಿತ್ಯದ ಚರಿತ್ರೆಯಲ್ಲಿ ಯಾವ ಒಂದು ಶತಮಾನದಲ್ಲೂ ಈ ಬಗೆಯ ವೈವಿಧ್ಯಮಯ ಸೃಷ್ಟಿಯನ್ನು, ಇಷ್ಟೊಂದು ಎತ್ತರದ ಪ್ರತಿಭೆಗಳನ್ನು ಕಾಣುವುದಿಲ್ಲ. ಅಷ್ಟೊಂದು ವಿಸ್ತಾರ, ವೈವಿಧ್ಯ, ಆಧುನಿಕ ಕನ್ನಡ ಸಾಹಿತ್ಯದ್ದು. ಇದನ್ನು ಸಮಗ್ರವಾಗಿ ಹಿಡಿದಿಡುವುದು ಅಸಾಮಾನ್ಯ ಸಾಹಸದ ಕೆಲಸವೇ ಸರಿ. ಶೇಷಗಿರಿರಾಯರು ಈ ಸವಾಲನ್ನು ಒಪ್ಪಿಕೊಂಡು ಹೊಸಗನ್ನಡ ಸಾಹಿತ್ಯದ ಇತಿಹಾಸವನ್ನು ಅದರ ಚಾರಿತ್ರಿಕ, ಸಾಂಸ್ಕೃತಿಕ ಹಿನ್ನೆಲೆಯೊಂದಿಗೆ ಸಮರ್ಥವಾಗಿ ದಾಖಲಿಸಿದ್ದಾರೆ." ಎಂದಿದ್ದಾರೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books