ʼಹೊಸಲು ದಾಟಿದ ಹೆಣ್ಣು' 1949ರ ಕಾಲಘಟ್ಟದಲ್ಲಿ ಹಿರಿಯ ಲೇಖಕ ಅ.ನ.ಕೃಷ್ಣರಾಯರು (ಅ.ನ.ಕೃ) ಬರೆದ ಕಾದಂಬರಿ. 1949ರ ನವೆಂಬರ್ ನಲ್ಲಿ ಹಾಗೂ 1954ರ ಮಾರ್ಚ್‌ನಲ್ಲಿ ಹೀಗೆ ಮೂರು ಮುದ್ರಣಗಳನ್ನು ಕಂಡಿದೆ. ಹೆಣ್ಣನ್ನು ಕೇಂದ್ರೀಕರಿಸಿ ರಚಿಸಿದ್ದು, ಸಮಾಜದ ದೃಷ್ಟಿಕೋನವನ್ನು ಸಮರ್ಥವಾಗಿ ಬಿಂಬಿಸುತ್ತದೆ.
‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...
READ MORE