ಖ್ಯಾತ ಬಿ.ಎಲ್. ವೇಣು ಅವರ ಸಾಮಾಜಿಕ ವಿಷಯ ವಸ್ತುವಿನ ಕಾದಂಬರಿ-ಹೃದಯರಾಗ. ಸಂಗೀತ ಪ್ರಧಾನ ವಸ್ತುವು ಪ್ರೇಮದ ಜೊತೆಜೊತೆಗೆ ಸಾಗುತ್ತದೆ. ವಸ್ತು, ನಿರೂಪಣೆ ಶೈಲಿ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. ಬಣ್ಣಗಳು, ದೊಡ್ಡ ಮನೆ, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ, ಬಣ್ಣದ ಗೊಂಬಿ (ಕಥಾ ಸಂಕಲನಗಳು), ಪರಾಜಿತ, ಪ್ರೇಮಪರ್ವ, ಅಜೇಯ, ಬೆತ್ತಲೆ ಸೇವೆ, ಅತಂತ್ರರು, ಗಂಡುಗಲಿ ಮದಕರಿ ನಾಯಕ, ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ದ, ಹೆಬ್ಬುಲಿ ಹಿರೇಮದಕರಿನಾಯಕ (ಮುಂತಾದ 26 ಕಾದಂಬರಿಗಳು), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ (ಮಿನಿ ಕಾದಂಬರಿಗಳು), ಯಮಲೋಕದಲ್ಲಿ ಮಾನವ, ಭೂಲೋಕಕ್ಕೆ ಬಂದ ಬಸವಣ್ಣ, ...
READ MORE