ಆತ್ಮವಿಶ್ವಾಸ ವ್ಯಕ್ತಿಯ ಬೆಳವಣಿಗೆಗೆ ಮುಖ್ಯವಾದದ್ದು. ಆತ್ಮವಿಶ್ವಾಸದ ಕೊರತೆಯಿಂದ ವ್ಯಕ್ತಿ ಬದುಕಿನಲ್ಲಿ ಸೋಲು ಅನುಭವಿಸುತ್ತಾನೆ. ಆತ್ಮವಿಶ್ವಾಸ ವ್ಯಕ್ತಿಯಲ್ಲೂ ಇರಬೇಕು, ಜೊತೆಗೆ ಸುತ್ತಲಿನ ಪರಿಸರದಲ್ಲಿಯೂ ಇರಬೇಕು. ಬದುಕಿನಲ್ಲಿ ಸೋಲಿನ ಸನ್ನಿವೇಶಗಳು ಎದುರಾದಾಗ ಅದನ್ನು ಮೆಟ್ಟಿ ನಿಲ್ಲಬಲ್ಲ ದೃಢತೆ ಬರುವುದು ಈ ಆತ್ಮವಿಶ್ವಾಸದಿಂದಲೇ. ಕೃತಿಯಲ್ಲಿ ಅರವಿಂದ ಚೊಕ್ಕಾಡಿಯವರು ಕೆಲವು ವ್ಯಕ್ತಿಗಳ ಉದಾಹರಣೆಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಳ್ಳುವುದು ಹೇಗೆ ಎಂಬುದನ್ನು ಮನಮುಟ್ಟುವಂತೆ ತಿಳಿಸಿದ್ದಾರೆ.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE