ಹುಲಿರಾಯ ಮತ್ತು ಇತರೆ ಕಥೆಗಳು ಎಂಬುದು ಕವಿ ಎಂ. ಗೋಪಾಲಕೃಷ್ಣ ಅಡಿಗ ಅವರ ಕಥೆಗಳ ಸಂಕಲನ. 1926-46 ಹಾಗೂ 1927-32 ಈ ಮಧ್ಯೆ ಬರೆದ ಕಥೆಗಳನ್ನು ಸಂಕಲಿಸಲಾಗಿದೆ. ಕವಿತೆ, ಕಾದಂಬರಿ, ವಿಮರ್ಶೆ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಲೇಖಕರು, ಕಥೆಗಳನ್ನು ಬರೆದಿದ್ದು ಕಡಿಮೆ. ಆದರೂ, ಕಥೆಗಳ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಥೆಗಳ ಪರಿಣಾಮಕತೆಯನ್ನು ಹೆಚ್ಚಿಸಿವೆ.
ಕನ್ನಡದಲ್ಲಿ ನವ್ಯಕಾವ್ಯಕ್ಕೆ ನಾಂದಿ ಹಾಡಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರನ್ನು ‘ಒಂದು ಜನಾಂಗದ ಕಣ್ಣು ತೆರೆಸಿದ ಕವಿ’ ಎಂದು ಗುರುತಿಸಲಾಗುತ್ತಿತ್ತು. ಅಡಿಗರು 1918ರ ಫೆಬ್ರುವರಿ 18ರಂದು ಜನಿಸಿದರು. ತಂದೆ ರಾಮಪ್ಪ ಮತ್ತು ತಾಯಿ ಗೌರಮ್ಮ. ಬೈಂದೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಆಯಿತು. ಬಿ.ಎ. ಆನರ್ಸ್ ಪದವಿ (1942) ಗಳಿಸಿದ ನಂತರ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ್ದರು. ಆಮೇಲೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ (1947) ಗಳಿಸಿದರು. ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕ (1948-52), ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ (1952-54) ...
READ MORE