ಖ್ಯಾತ ಕಾದಂಬರಿಕಾರ ಅ.ನ. ಕೃಷ್ಣರಾಯರ ಕಾದಂಬರಿ-ಹುಲಿಯುಗುರು. ಇದೇ ಶೀರ್ಷಿಕೆಯ ಭಾಗ-1, 2 ಹಾಗೂ 3 ಹೀಗೆ ಸರಣಿ ರೂಪದಲ್ಲಿ 3 ಕಾದಂಬರಿಗಳನ್ನು ರಚಿಸಿದ್ದಾರೆ. ಕಾದಂಬರಿಯ ಪಾತ್ರಗಳಲ್ಲಿ, ಘಟನೆಗಳಲ್ಲಿ ಮನೋವೈಜ್ಞಾನಿಕತೆಯ ಒಳನೋಟವನ್ನು ಕಾಣಬಹುದು. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಾದಂಬರಿಯು ಓದುಗರನ್ನು ಸೆಳೆಯುತ್ತದೆ.
‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...
READ MORE