‘ಸಂಯುಕ್ತ ಕರ್ನಾಟಕ’ ಕಾದಂಬರಿ ಸ್ಪರ್ಧೆಯಲ್ಲಿ ಬಹುಮಾನ ಪಡೆದು ಪುಸ್ತಕ ರೂಪದಲ್ಲಿ ಎರಡು ಮುದ್ರಣಗಳನ್ನು ಕಂಡ ‘ಒಲವಿನ ಹಾಡು’ ಕಾದಂಬರಿಯ ಜನಪ್ರಿಯ ಲೇಖಕರಾದ ಶ್ರೀ ಕೃಷ್ಣಮೂರ್ತಿ ಕುಲಕರ್ಣಿ ಅವರು ಇದೀಗ ‘ಹುಟ್ಟುವುದೊಂದು ಬಾರಿ’ ಕಾದಂಬರಿಯಲ್ಲಿ ಸ್ವಂತಿಕೆಯ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ದಾಂಪತ್ಯ ಜೀವನ ರೂಪಿಸಿಕೊಳ್ಳಲು ನಿರ್ಧರಿಸಿದ ದಂಪತಿಯ ಸುತ್ತ ಕಥೆಯನ್ನು ಹೆಣೆದಿದ್ದಾರೆ. ಈ ಪ್ರಯತ್ನದಲ್ಲಿ ಮಧುಕರ್ ಹರ್ಷ ದಂಪತಿ ಎದುರಿಸಿದ ಸಮಸ್ಯೆಗಳೇನು ಎನ್ನುವುದೇ ಇಲ್ಲಿನ ಕಥಾವಸ್ತು….
ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು ಬೆಳ್ಳೆತೆರೆ ಕಂಡಿವೆ. 'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...
READ MORE