ಲೇಖಕ ರಂಗನಾಥ ಕಂಟನಕುಂಟೆ ಅವರ ಕವನ ಸಂಕಲನ ’ಹೂವಿನ ಬೇಟೆ’. ಒಟ್ಟು 73 ಕವನಗಳು ಸಂಕಲನಗೊಂಡಿವೆ. ಸಾಮಾಜಿಕ ವಿದ್ಯಮಾನಗಳು, ವ್ಯವಸ್ಥೆಯ ಸ್ವರೂಪ, ಮೌಢ್ಯ ಇತ್ಯಾದಿ ವಿಷಯ ವಸ್ತುವನ್ನು ಒಳಗೊಂಡಿದ್ದು, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆಯಂತಹ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ.
ಕವಿ, ಲೇಖಕ, ಚಿಂತಕರಾದ ರಂಗನಾಥ ಕಂಟನಕುಂಟೆಯವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕಂಟನಕುಂಟೆಯಲ್ಲಿ ಪೂರ್ಣಗೊಳಿಸಿದ ರಂಗನಾಥ್ ಅವರು ಸರ್ಕಾರಿ ಪದವಿ ಪೂರ್ಣ ಕಾಲೇಜು ದೊಡ್ಡಬಳ್ಳಾಪುರದಲ್ಲಿ ಪಿಯುಸಿ ಮುಗಿಸಿ, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಐಚ್ಛಿಕ ಕನ್ನಡದಲ್ಲಿ ಪದವಿ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಎಂ.ಎ ಪದವಿ ಪಡೆದ ಅವರು ಆನಂತರದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಜನಭಾಷೆ ಮತ್ತು ಪ್ರಭುತ್ವ ಭಾಷೆಗಳ ನಡುವಿನ ಸಂಘರ್ಷದ ನೆಲೆಗಳು ಎಂಬ ವಿಷಯದಡಿ ತಮ್ಮ ಪಿಎಚ್.ಡಿ ಮುಗಿಸಿದ್ದಾರೆ. ಕಳೆದ ಇಪತ್ತು ವರ್ಷಗಳಿಂದ ಅಧ್ಯಾಪಕರಾಗಿ ...
READ MORE