ಖ್ಯಾತ ಕವಿ ಮತ್ತು ಲೇಖಕ ಡಾ.ನಾ ಮೊಗಸಾಲೆ ಅವರ ಹೊಸ ಕಾದಂಬರಿ ‘ಇದ್ದೂ ಇಲ್ಲದ್ದು’. ದೇವರ ಕುರಿತು ಮತ್ತೆ ಮತ್ತೆ ಚಿಂತಿಸುವ ಮೊಗಸಾಲೆಯವರು ಈ ಕಾದಂಬರಿಯಲ್ಲಿ ತಲೆಮಾರುಗಳ ಅಂತರದಲ್ಲಿ ದೇವರ ಕುರಿತ ಪರಿಕಲ್ಪನೆಯು ಪರಿಸ್ಥಿತಿಯ ಕಾರಣದ ಅನಿವಾರ್ಯತೆಯ ಹಿನ್ನೆಲೆಯಿಂದಾಗಿಯೂ ಹೇಗೆ ಬದಲಾಗಿದೆ ಮತ್ತು ಅದು ಹೇಗೆ ಮತ್ತೆ ಪ್ರಕೃತಿಯ ಮಡಿಲನ್ನೆ ಆಶ್ರಯಿಸಿದೆ ಎಂಬುದರ ಚಿತ್ರಣವನ್ನು ಮನೋಜ್ಞವಾಗಿ ಕಟ್ಟಿಕೊಟ್ಟಿದ್ದಾರೆ. ಲಾಕ್‌ಡೌನ್ ಸಂದರ್ಭದ ಹಿನ್ನೆಲೆಯಲ್ಲಿ ಅವರು ಬರೆದ ಈ ಕಾದಂಬರಿ, ಗ್ರಾಮೀಣ ಮತ್ತು ನಗರಗಳ ನಡುವಿನ ಕೊಂಡಿಯೊಂದು ನಿಧಾನವಾಗಿ ಬೇರೆ ಬೇರೆಯಾಗುತ್ತಿರುವಲ್ಲಿನ ತಲ್ಲಣಗಳ ಬಗ್ಗೆಯೂ ಸೂಕ್ಷ್ಮವಾಗಿ ಹೇಳುತ್ತಿದೆ
ಕಾಸರಗೋಡು ತಾಲೂಕಿನ ಕೋಳ್ಯೂರಿನ ಮೊಗಸಾಲೆ ಎಂಬ ಗ್ರಾಮದಲ್ಲಿ ಜನಿಸಿದ ಡಾ. ನಾರಾಯಣ ಮೊಗಸಾಲೆ ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆಗೆ ಕಥೆ ಕಾದಂಬರಿಗಳನ್ನು ರಚಿಸಿರುವ ಅವರು ಸಾಹಿತ್ಯ ಸೃಷ್ಟಿಯ ಜೊತೆಗೆ ಸಾಹಿತ್ಯ ಪ್ರಸಾರದಲ್ಲಿಯೂ ವಿಶೇಷ ಕೆಲಸ ಮಾಡಿದ್ದಾರೆ. ಕಾಂತಾವರ ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ವರ್ತಮಾನದ ಮುಖಗಳು, ಪಲ್ಲವಿ, ಮೊಗಸಾಲೆಯ ನೆನಪುಗಳು, ಪ್ರಭವ, ಸ್ವಂತಕ್ಕೆ ಸ್ವಂತಾವತಾರ, ನೆಲದ ನೆರಳು, ಇದಲ್ಲ, ಇದಲ್ಲ, ಇಹಪರದ ಕೊಳ, ಕಾಮನ ಬೆಡಗು, ದೇವರು ಮತ್ತೆ ಮತ್ತೆ (ಕವನ ಸಂಕಲನಗಳು), ಅರುವತ್ತರ ತೇರು, ಪೂರ್ವೋತ್ತರ, ಕರಣ ಕಾರಣ (ಸಮಗ್ರ ಕಾವ್ಯ), ಮಣ್ಣಿನ ...
READ MORE