‘ಇದೆ ಎಂದರೆ ಇದೆ ಇಲ್ಲ ಎಂದರೆ ಇಲ್ಲ’ ಸಮುದ್ಯತಾ ಅವರ ಚೊಚ್ಚಲ ಕಾದಂಬರಿಯಾಗಿದೆ. ಈ ಕಥನವು ಮಧ್ಯಮ ವರ್ಗದ ಕುಟುಂಬವೊಂದರ ಸ್ತ್ರೀಯರ ಬಹುಸ್ತರೀಯ ಸಂಕಟವನ್ನು ಮುಖ್ಯವಾಗಿ ಕೇಂದ್ರೀಕರಿಸಿ ನಿರೂಪಿಸುತ್ತದೆ. ಮನೆತನದ ಬದುಕಿನ ಏಳು ಬೀಳಿನ ಗತಿಬಿಂಬ ನಾಲ್ಕು ತಲೆಮಾರುಗಳನ್ನು ಹಾದು ಸುಮಾರು ಒಂದು ಶತಮಾನವನ್ನು ವ್ಯಾಪಿಸುತ್ತದೆ… ಕುಟುಂಬದ ದೈನಿಕ ಅನುಭವದ ವಾಸ್ತವಿಕ ವಿವರಗಳನ್ನು ನೇಯುವ ಈ ಕೃತಿಯನ್ನು ಹವ್ಯಕ ಸಮುದಾಯದ ಸಾಂಸ್ಕೃತಿಕ ದಾಖಲೆಯಾಗಿ ಓದಬಹುದಾಗಿದೆ… ಕಷ್ಟಗಳು ಯಾವ ರೂಪ ಮತ್ತು ಮೂಲದಿಂದ ಬಂದರೂ ಅವುಗಳನ್ನು ಅನುಭವಿಸುವವಳು ಹೆಣ್ಣು ಎಂಬ ಆಶಯ ಕಾದಂಬರಿಯುದ್ದಕ್ಕೂ ಪುನರಾವರ್ತನೆಯಾಗುತ್ತದೆ… ಸಂಸಾರ ಸುಸೂತ್ರ ಸಾಗದಿರುವುದಕ್ಕೆ ಕಾದಂಬರಿ ಸೂಚಿಸುವ ಮೂಲ ಕಾರಣವಾದರೂ ಯಾವುದು? ಮುಳುಗಡೆಯಂಥ ಪ್ರಾಕೃತಿಕ ವಿಪತ್ತೆ? ಮನುಷ್ಯ ಮಾಡುವ ಆಯ್ಕೆಗಳೆ? ಕಂದಾಚಾರಗಳೆ? ಗುಟ್ಟು ಬಿಟ್ಟು ಕೊಡದ ಕಾಲವೆ? ಕೈಮೀರಿದ ಅಸಹಾಯಕತೆಗೆ ಇನ್ನೊಂದು ಹೆಸರಾದ ಕೈಕೊಟ್ಟ ದೈವವೆ? ದುರ್ಬಲ ಪುರುಷರೆ? ಇಂಥ ತಾತ್ವಿಕ ಪ್ರಶ್ನೆಗಳಿಗೆ ಉತ್ತರಿಸುವ ಆಸಕ್ತಿಯನ್ನು ಕಾದಂಬರಿ ಓದುಗರಿಗೆ ಬಿಡುತ್ತದೆ.
ಸಾಗರ ಸಮೀಪದ ಶೆಡ್ತೀಗೆರೆ ಎಂಬ ಹಳ್ಳಿಯಲ್ಲಿ ವಾಸವಾಗಿರುವ ಸಮುದ್ಯತಾ ವೆಂಕಟರಾಮು ಅವರು ಕೃಷಿ ಕುಟುಂಬದ ಗೃಹಿಣಿ. ಬಿ.ಎ ಪದವಿ ಪಡೆದಿರುವ ಇವರು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಆಸಕ್ತರು, ಹವ್ಯಾಸವಾಗಿ ಗಮಕ ವಾಚನ ಕಲೆಯನ್ನು ಅಭ್ಯಾಸಮಾಡಿದವರು. ರಾಜ್ಯಾದ್ಯಂತ ಹಲವಾರು ಗಮಕ ಕಾರ್ಯಕ್ರಮಗಳನ್ನು ನೀಡದ ಅನುಭವ ಇವರಿಗಿದೆ. ‘Forever Forty ಕರ್ನಲ್ ವಸಂತ್’ (ಸುಭಾಷಿಣಿ ವಸಂತ್ ಮತ್ತು ವೀಣಾ ಪ್ರಸಾದ್) ಎಂಬ ಇಂಗ್ಲಿಷ್ ಪುಸ್ತಕದ ಭಾವಾನುವಾದವನ್ನು ಇವರು ಮಾಡಿದ್ದು, ಪ್ರಕಟಗೊಂಡಿದೆ. ಕೃತಿಗಳು: ಭಾನುಮತಿಯ ಮುತ್ತುಗಳು ...
READ MORE