‘ಇಗೋ ಕನ್ನಡ-ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಕನ್ನಡ ಕಳಕಳಿಯ ದ್ಯೋತಕವಾಗಿ ಮೂಡಿ ಬಂದ ಕೃತಿ-ಇಗೋ ಕನ್ನಡ. ಪ್ರಜಾವಾಣಿಯಲ್ಲಿ ಅಂಕಣ ಬರೆಹದಲ್ಲಿ ಕನ್ನಡದ ಪರಿಕಲ್ಪನೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಅಥವಾ ಕನ್ನಡವನ್ನು ಹೇಗೆ ಬಳಸಬೇಕು ಎಂಬ ನಿಟ್ಟಿನಲ್ಲಿ ಹಾಗೂ ಸಾಮಾನ್ಯವಾಗಿ ಮಾಡಬಹುದಾದ ತಪ್ಪುಗಳನ್ನು ಸರಿಪಡಿಸಿ, ಅವುಗಳ ಕಾರಣಗಳನ್ನು ತಿಳಿಸುವ ಸರಳಗನ್ನಡದಲ್ಲಿ ಬರೆದ ಬರೆಹಗಳಿವು. ಲೇಖಕರ ಈ ಅಂಕಣ ಬರೆಹವು ಕನ್ನಡದ ಪರಿಶುದ್ಧ ಕಲಿಕೆಗೆ ಉಪಯುಕ್ತವಾಗಿ, ಜನಮನ ಪಡೆದಿತ್ತು.
ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು 1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...
READ MORE