ಲೇಖಕಿ ಪೂರ್ಣಿಮಾ ಮಾಳಗಿಮನಿ ಅವರ ಕಾದಂಬರಿ-ಇಜಯಾ. ಸಾಹಿತಿ ʼಕೇಶವ ಮಳಗಿʼ ಅವರು ಈ ಕೃತಿಗೆ ಮುನ್ನುಡಿ ಬರೆದು ‘ಸುಖದ ಪರಿಕಲ್ಪನೆ ಮತ್ತು ಕನಸು ದುಸ್ವಪ್ನವಾಗುವ ಭಯಾನಕತೆಯನ್ನು ಕಥೆ ಒಳಗೊಂಡಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ವಿಮರ್ಶಕ ನರೇಂದ್ರ ಪೈ ಅವರು ಬೆನ್ನುಡಿಯಲ್ಲಿ "ಒಂದು ಸುಂದರ ಕಥನದ ಓಘದಲ್ಲಿ ಪೂರ್ಣಿಮಾ ಅವರು ಇದನ್ನು ಓದುಗನ ಮನಸ್ಸಿನಲ್ಲಿ "ಹುಳ" ಬಿಟ್ಟಂತೆ ಬಿಡುವಲ್ಲಿ ಯಶಸ್ವಿಯಾಗಿರುವುದು ಮೆಚ್ಚುಗೆಗೂ ಅಚ್ಚರಿಗೂ ಕಾರಣವಾಗುತ್ತದೆ" ಎಂದು ಪ್ರಶಂಸಿಸಿದ್ದಾರೆ.
ಲೇಖಕಿ ಪೂರ್ಣಿಮಾ ಮಾಳಗಿಮನಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹನುಮಂತಪುರದವರು. ಮಂಡ್ಯ ಜಿಲ್ಲೆಯ ನವೋದಯ ವಿದ್ಯಾಲಯದಲ್ಲಿ ಪ್ರೌಢಶಿಕ್ಷಣ ಪೂರೈಸಿ, ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿ. ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಪದವೀಧರೆ. 'ಎನಿ ವನ್ ಬಟ್ ದಿ ಸ್ಪೌಸ್' ಎನ್ನುವ ಇಂಗ್ಲೀಷ್ ಕಿರುಗತೆಗಳ (2017) ಸಂಕಲನ ಪ್ರಕಟಿಸಿದ್ದು, ನಾಡಿನ ವಿವಿಧ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇವರ ಹಲವಾರು ತಾಂತ್ರಿಕ ಹಾಗೂ ಸಾಹಿತ್ಯಕ ವಿಷಯ ಕುರಿತ ಲೇಖನಗಳು ಪ್ರಕಟವಾಗಿವೆ. ಪ್ರತಿಷ್ಠಿತ ಭಾರತೀಯ ವಾಯುಸೇನೆಯಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಧಿಕಾರಿಯಾಗಿ ಆರು ವರ್ಷ ಸೇವೆ ಸಲ್ಲಿಸಿ, ಪ್ರಸ್ತುತ ಜಂಟಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು: Anyone but the ...
READ MORE