‘ಇಂಪ್ರೆಶನಿಸಂ’ ಕರ್ನಾಟಕ ಲಲಿತಕಲಾ ಅಕಾಡೆಮಿಯ ಜನಪ್ರಿಯ ಕಲಾಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಲೇಖಕ ಅ.ಲ. ನರಸಿಂಹನ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಇಂದು ಕಲೆ ಹಾಗೂ ಜನಸಾಮಾನ್ಯರ ನಡುವೆ ಭಾರಿ ಅಂತರವಿದೆ. ಇಂದಿನ ಸಮಕಾಲೀನ ಕಲೆಯು ಜನಸಾಮಾನ್ಯರಿಗೆ ಅರ್ಥವಾಗದಿರುವುದೇ ಇದಕ್ಕೆ ಕಾರಣ ಎಂದು ಹಲವರ ಅಭಿಪ್ರಾಯ. ದೃಶ್ಯ ಕಲೆಗಳನ್ನು ಆಸ್ವಾದಿಸುವ ದೃಷ್ಟಿಯಿಂದ ನಮ್ಮ ಸಾಮಾನ್ಯ ಶಿಕ್ಷಣದಲ್ಲೂ ಗಂಭೀರ ಪ್ರಯತ್ನಗಳು ನಡೆಯುತ್ತಿಲ್ಲ. ಅಂತೆಯೇ ಈ ಕೊರತೆಗಳನ್ನು ಸ್ವಲ್ಪವಾದರೂ ತುಂಬುವುದು ಈ ಜನಪ್ರಿಯ ಕಲಾಮಾಲಿಕೆಯ ಆಶಯ. ಹೀಗೆ ಸಾಮಾನ್ಯರಿಗೆ ದೃಶ್ಯಕಲೆಗಳ ಪ್ರಾಥಮಿಕ ಜ್ಞಾನ ಒದಗಿಸುವ ದೃಷ್ಟಿಯಿಂದಲೇ ಇದನ್ನು ರೂಪಿಸಲಾಗಿದೆ. ಇದರಲ್ಲಿ ದೃಶ್ಯಕಲೆಯ ತಾತ್ವಿಕ ಅಂಶಗಳು, ಮಾಧ್ಯಮಗಳು, ತಂತ್ರಗಳು, ಇತಿಹಾಸ, ಆಧುನಿಕ ಕಲಾ ಪಂಥಗಳು ಸೇರಿದಂತೆ ಹಲವು ವಿಷಯಗಳ ಕುರಿತಾದ ವಿಚಾರಗಳ ವಿವರಗಳಿವೆ. ಈ ಮೂಲಕ ಕಲೆಯ ಕುರಿತಾದ ಮಾಹಿತಿಯನ್ನು ತಲುಪಿಸುವುದು ಈ ಕೃತಿಯ ಆಶಯ.
©2024 Book Brahma Private Limited.