ಇನ್ನಷ್ಟು ಕನ್ನಡ

Author : ಕೆ.ವಿ. ತಿರುಮಲೇಶ್‌

Pages 200

₹ 125.00




Year of Publication: 2011
Published by: ಅಭಿನವ ಪ್ರಕಾಶನ
Address: 17/18-2, ಮೊದಲನೆಯ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಇಂಗ್ಲಿಷ್ ಅಧ್ಯಾಪಕರಾಗಿ, ಭಾಷಾವಿಜ್ಞಾನಿಯಾಗಿ ಕೆಲಸ ಮಾಡಿರುವ ಕೆ.ವಿ ತಿರುಮಲೇಶ್ ಅವರ ಕೃತಿ ’ಇನ್ನಷ್ಟು ಕನ್ನಡ’. ಈ ಕೃತಿಯು ಭಾಷೆ ಮತ್ತು ಭಾಷಾಶಾಸ್ತ್ರದ ಕುರಿತಾದ ಹಲವು ಲೇಖನಗಳನ್ನು ಒಳಗೊಂಡಿದೆ.

ಭಾಷಾಶಾಸ್ತ್ರದ ಕುರಿತಾದ ಹಲವು ವಿಮರ್ಶಾತ್ಮಕ ಲೇಖನಗಳನ್ನು ನೀಡಿರುವ ಕೆ.ವಿ ತಿರುಮಲೇಶ್ ಅವರು ಭಾಷಾ ಸಿದ್ಧಾಂತಗಳನ್ನು ಪ್ರಸ್ತುತಪಡಿಸುವ ಮೂಲಕ, ಭಾಷೆಯ ವಿವಿಧ ಆಯಾಮಗಳನ್ನು ಇಲ್ಲಿ ತಿಳಿಸಿದ್ದಾರೆ. ಭಾಷಾಶಾಸ್ತ್ರದ ಅಧ್ಯಯನದ ದೃಷ್ಟಿಯಿಂದ ಈ ಕೃತಿ ಪರಾಮರ್ಶನ ಗ್ರಂಥವೂ ಆಗಿದೆ. 

About the Author

ಕೆ.ವಿ. ತಿರುಮಲೇಶ್‌
(12 September 1940 - 30 January 2023)

ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು. ತಮ್ಮ ಬಾಲ್ಯವನ್ನು (ಜ. 1940) ಕಾಸರಗೋಡಿನ ಕಾರಡ್ಕದಲ್ಲಿ ಮಲೆಯಾಳಿಗಳ ನಡುವೆ ಕಳೆದ ತಿರುಮಲೇಶ್ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಕರ್ನಾಟಕದಿಂದ ಹೊರಗಡೆಯೇ ಇದ್ದು ಕಳೆದಿದ್ದಾರೆ. ಹೈದರಾಬಾದ್ ನ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್’ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ‘ಮುಖವಾಡಗಳು’, ‘ವಠಾರ’, ‘ಮಹಾಪ್ರಸ್ಥಾನ’, ಮುಖಾಮುಖಿ’, ‘ಅವಧ’, ‘ಪಾಪಿಯೂ’ ಕವನ ಸಂಕಲನಗಳು. ತಿರುಮಲೇಶ್ ...

READ MORE

Related Books