ಇಸ್ಲಾಂ ಧರ್ಮ ಹಾಗೂ ಆ ಧರ್ಮದ ಮಹಿಳೆಯರ ಬದುಕಿನ ಚಿತ್ರಣವನ್ನು ನೀಡುವ ಕೃತಿ - ಇಸ್ಲಾಂ ಮತ್ತು ಮಹಿಳೆಯರು. ಈ ಕೃತಿಯು ಮುಖ್ಯವಾಗಿ ಇಸ್ಲಾಂ ಧರ್ಮದ ಮಹಿಳೆಯರ ಸಾಮಾಜಿಕ ಜೀವನ, ಸಂಪ್ರದಾಯಗಳ ಕುರಿತು ಚರ್ಚಿಸುತ್ತದೆ. ಅಸ್ಗರ್ ಅಲಿ ಎಂಜಿನಿಯರ್ ಅವರು ಬರೆದ ಕೃತಿಯನ್ನು ಹಸನ್ ನಯೀಂ ಸುರಕೋಡು ಅವರ ಕನ್ನಡಕ್ಕೆ ಅನುವಾದಿಸಿದ್ದಾರೆ.
ಹಸನ್ ನಯೀಂ ಸುರಕೋಡ ಅವರು ಬೆಳಗಾವಿ ಜಿಲ್ಲೆಯ ರಾಮದುರ್ಗದವರು. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ಇಂಗ್ಲಿಷ್, ಉರ್ದು, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ಪರಿಣಿತರು. ಸಮಾಜವಾದಿ ಚಿಂತನೆಗಳನ್ನು ಕನ್ನಡಕ್ಕೆ ತರುವುದಕ್ಕೆ ಪ್ರಯತ್ನಿಸುತ್ತಿರುವ ಅವರು ಆ ನಿಟ್ಟಿನಲ್ಲಿ ರಾಮಮನೋಹರ ಲೋಹಿಯಾ, ಕಿಶನ್ ಪಟ್ನಾಯಕ್, ಮಧು ಲಿಮೆಯೆ ಮುಂತಾದವರ ಬರಹಗಳನ್ನು ಅನುವಾದಿಸಿದ್ದಾರೆ. ಕೋಮು ಸೌಹಾರ್ದದ ನೆಲೆಗಳನ್ನು ಇಂಗಿಸುವ ಹಲವಾರು ಬರೆಹಗಳು ಇವರಿಂದ ಕನ್ನಡಕ್ಕೆ ಅನುವಾದಗೊಂಡಿವೆ. ಉರ್ದು ಭಾಷೆಯ ಮಹಾಕವಿ ಫೈಜ್ ಅಹಮದ್ ಫೈಜ್ ಅವರ ಕಾವ್ಯ ಮತ್ತು ಬದುಕು, ಸಾದತ್ ಹಸನ್ ಮಂಟೋ ಅವರ ಕಥನ ಕೃತಿಗಳು, ಅಮೃತಾ ...
READ MORE