ಡಾ. ವಿಜಯಶ್ರೀ ಸಬರದ ಅವರ ಲೇಖನ ಸಂಕಲನ ‘ಜಾನಪದ ಮತ್ತು ಮಹಿಳೆ’. ಈ ಕೃತಿಯಲ್ಲಿ ಒಟ್ಟು ಹನ್ನೊಂದು ಲೇಖನಗಳನ್ನೊಳಗೊಂಡ ಎರಡು ಭಾಗಗಳಿವೆ. ಇಲ್ಲಿನ ಲೇಖನಗಳು ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ ಎಂದು ತಿಳಿಸಿದ್ದಾರೆ ಲೇಖಕಿ ವಿಜಯಶ್ರೀ ಸಬರದ. ಹಾಗೇ ಕೆಲವು ವಿಚಾರ ಸಂಕಿರಣಗಳಲ್ಲಿ ಸಾದರ ಪಡಿಸಿದ ಲೇಖನಗಳಿವೆ. ಹೀಗಾಗಿ ವಿಚಾರಗಳ ಮಂಡನೆಯಲ್ಲಿ ಪುನರಾವರ್ತನೆಯಾಗುವ ಸಾಧ್ಯತೆಯಿದೆ. ಮೊದಲನೆಯ ಭಾಗದ ಲೇಖನಗಳು ಚಿಂತನೆಹೆ ಎಡೆಮಾಡಿಕೊಡುವ ಪರಿಚಯಾತ್ಮಕ ಲೇಖನಗಳಾಗಿವೆ. ಎರಡನೆಯ ಭಾಗದಲ್ಲಿ ವಿಶ್ಲೇಷಣೆ, ವಿಮರ್ಶೆ ನೆಲೆಯಲ್ಲಿ ವಿಷಯವನ್ನು ಪ್ರತಿಪಾದಿಸಿದ ಲೇಖನಗಳಿವೆ ಎಂದು ತಿಳಿಸಿದ್ದಾರೆ.
ಮಹಿಳೆಯರ ಶೋಷಣೆ ಮತ್ತು ಸ್ತ್ರೀಯರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಮ್ಮ ಖಚಿತ ಅಭಿಪ್ರಾಯ ಮಂಡಿಸುವ ಲೇಖಕಿ ವಿಜಯಶ್ರೀ ಸಬರದ. ಅವರು ಜನಿಸಿದ್ದು 1957ರ ಫೆಬ್ರುವಿರ 1ರಂದು. ತಂದೆ ಗುಣವಂತರಾವ ಪಾಟೀಲ. ತಾಯಿ ಸಂಗಮ್ಮ. ಪ್ರಾರಂಭಿಕ ಶಿಕ್ಷಣ ಹಾಗೂ ಕಾಲೇಜು ಪದವಿ ಶಿಕ್ಷಣವನ್ನು ಬೀದರ್‌ನಲ್ಲಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ’ಅನುಪಮಾ ನಿರಂಜನರ ಕಾದಂಬರಿಗಳು; ಒಂದು ಅಧ್ಯಯನ” ಎಂಬ ಪ್ರಬಂಧ ಮಂಡಿಸಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದರು. ಬೀದರ್‌ನ ಅಕ್ಕ ಮಹಾದೇವಿ ಮಹಿಳಾ ವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ...
READ MORE