ಕೆ.ಎಂ. ಪಣಿಕ್ಕರ್ ಅವರು ಪ್ರಜಾತಂತ್ರ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆಗಳ ಆದರ್ಶ ಮತ್ತು ಚಿಂತನೆಗಳ ನಡುವೆ ಇರುವ ವ್ಯತ್ಯಾಸಗಳ ಕುರಿತು 'ಜಾತಿ ಮತ್ತು ಪ್ರಜಾತಂತ್ರ' ಕೃತಿಯಲ್ಲಿ ಅವಲೋಕಿಸಿದ್ದಾರೆ. ಈ ಕೃತಿಯನ್ನು ನಾ. ದಿವಾಕರ ಅವರು ಕನ್ನಡೀಕರಿಸಿದ್ದಾರೆ. ’ಪ್ರಜಾತಂತ್ರ ಜಾತಿ ವ್ಯವಸ್ಥೆಗೆ ತದ್ವಿರುದ್ಧ ದಿಕ್ಕಿನಲ್ಲಿ ನಿಲ್ಲುತ್ತದೆ' ಎಂದು ಅಭಿಪ್ರಾಯ ಪಡುವ ಕೆ ಎಂ ಪಣಿಕ್ಕರ್, ಪ್ರಜಾತಂತ್ರವನ್ನು ವ್ಯಾಖ್ಯಾನಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...
READ MORE