`ಜಗಜ್ಜನನಿ ಭಾರತ' ವೈಚಾರಿಕ ಬರಹಗಳ ಪುಸ್ತಕವಿದು. ಲೇಖಕ ಕೋ. ಚೆನ್ನಬಸಪ್ಪ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ, ಪಾಶ್ಚಾತ್ಯ ಅನುಕರುಣೆ ಮಾಲಿನ್ಯದಿಂದ ತೊಳಲಾಡುತ್ತಿರುವ ಭಾರತೀಯ ಮನಸ್ಸಿಗೆ, ಶ್ರೀ ಅರವಿಂದರು ತಮ್ಮ ಸತ್ವಶಾಲಿ ವಿಚಾರಧಾರೆಯ ಮೂಲಕ ನೀಡಿದ ಉಪಶಮನ ಕ್ರಮಗಳು ಹಲವಾರು. ರಾಜಕೀಯ, ಸಾಮಾಜಿಕ, ಆರ್ಥಿಕ ಕ್ಷೇತ್ರಗಳಲ್ಲಿ ಭಾರತವು ಎದುರಿಸುತ್ತಿರುವ ಸಮಸ್ಯೆಗಳು, ಅವುಗಳಿಗೆ ಶ್ರೀ ಅರವಿಂದರು ಸೂಚಿಸಿರುವ ಅತ್ಯಮೂಲ್ಯ ಪರಿಹಾರೋಪಾಯಗಳೂ ಅನೇಕ. ಇವುಗಳ ಮೇಲೆ ಬೆಳಕು ಚೆಲ್ಲುವ ಈ ಸಂಗ್ರಹ ಓದುಗರ ಸ್ವದೇಶಾಭಿಮಾನಕ್ಕೆ ಸಂಪೂರ್ಣತೆಯನ್ನು ತಂದುಕೊಡುವಂತಹದ್ದು ಎಂದು ಈ ಕೃತಿಯಲ್ಲಿ ವಿವರಿಸಲಾಗಿದೆ.
ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...
READ MORE