ಜಾಗೋ ಭಾರತ್-ಭಾಗ 1 ಅಂಕಣ ಬರಹಗಳನ್ನು ಲೇಖಕ ಚಕ್ರವರ್ತಿ ಸೂಲಿಬೆಲೆ ಅವರು ರಚಿಸಿದ್ದಾರೆ. ಜಯವಾಣಿಯಲ್ಲಿ ಪ್ರಕಟವಾದ ದೇಶ ಮೊದಲೆಂದ ಸೈನಿಕರಿಗೆ ಸಲಾಮ್, ಭಾರತದ ಕಂಕುಳಲ್ಲಿ ಮತ್ತೊಂದು ಕಾಶ್ಮೀರ, ಯಾವ ದಿಕ್ಕಿನಿಂದ ನೋಡಿದರೂ ಹೊಡೆತ ಸೈನ್ಯಕ್ಕೇ… , ಅಮೇರಿಕಾದಿಂದ ಕಲಿಯಬೇಕಾದ್ದು.. , ಶಾಂತಿಯ ಮಂತ್ರಕ್ಕೆ ಅಣ್ವಸ್ತ್ರದ ಅಕ್ಷತೆ ಇಂತಹ ಹಲವಾರು ಅಂಕಣಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ. ಬರಹಗಳು ವೈವಿಧ್ಯಮಯ, ಮಾಹಿತಿಭರಿತ, ಧ್ವನಿಪೂರ್ಣ. ರಾಜಕೀಯ, ಸಾಮಾಜಿಕ, ಆರ್ಥಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಸಮಸ್ಯೆಗಳು ಇತ್ಯಾದಿ ವಿಶ್ಲೇಷಣೆ ಈ ಕೃತಿಯಲ್ಲಿದೆ.
ಚಕ್ರವರ್ತಿ ಸೂಲಿಬೆಲಿ ಎಂದೇ ಗುರುತಿಸಿಕೊಳ್ಳುವ ಮಿಥುನ್ ಚಕ್ರವರ್ತಿ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದವರು. 1980ರ ಏಪ್ರಿಲ್ 9 ರಂದು ಜನನ. ಓದಿದ್ದು, ಬೆಳೆದಿದ್ದು ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ. ತಂದೆ ದೇವದಾಸ್ ಸುಬ್ರಾಯ್ ಶೇಟ್, ಸೂಲಿಬೆಲಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿದ್ದಾರೆ. ಬೆಂಗಳೂರು ಜೈನ್ ಕಾಲೇಜಿನಲ್ಲಿ ಪಿಯುಸಿ ನಂತರ ಭಟ್ಕಳದ ಅಂಜುಮನ್ ಎಂಜಿನಿಯರಿಂಗ್ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದರು. ವಾಗ್ಮಿ, ಅಂಕಣಕಾರ. ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ ಸೂಲಿಬೆಲಿ ಅವರು ‘ಮೇರಾ ಭಾರತ್ ಮಹಾನ್’, ‘ಪೆಪ್ಸಿ ಕೋಕ್ ಅಂತರಾಳ’, ‘ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯವೀರ ...
READ MORE