ಲೇಖಕ ಜೋಗಿ ಅವರ ಕಥಾ ಸಂಕಲನ-ಜರಾಸಂಧ. ಕಥೆಯ ವಸ್ತು, ನಿರೂಪಣಾ ಶೈಲಿ, ಸನ್ದನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳೀಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮೂಲತಃ ಸೂರತ್ಕಲ್ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಯ್ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...
READ MORE