ಕತೆಗಾರ ಜಯಂತ ಕಾಯ್ಕಿಣಿ ಅವರ ಮೂರು ಕತಾ ಸಂಕಲನಗಳನ್ನು ಒಳಗೊಂಡ ಸಂಗ್ರಹವಿದು. ಈ ಮೂರೂ ಸಂಕಲನಗಳು ಜಯಂತ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದು ಕೊಟ್ಟವು ಎಂಬುದು ವಿಶೇಷ. ಜಯಂತ ಅವರ ಮೊದಲ ಕತೆಗಳ ಸಂಕಲನ ’ತೆರೆದಷ್ಟು ಬಾಗಿಲು’ ಹಾಗೂ ’ದಗಡು ಪರಬನ ಅಶ್ವಮೇಧ’ ಮತ್ತು ’ಅಮೃತಬಳ್ಳಿ ಕಷಾಯ’ ಸಂಕಲನದ ಕತೆಗಳನ್ನು ಒಳಗೊಂಡ ಸಂಕಲನ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ. ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 1989