ಜಯತೀರ್ಥ ರಾಜ ಪುರೋಹಿತರು ಕನ್ನಡ ಅಭಿವೃದ್ಧಿ ನಿರ್ದೇಶನಾಲಯದ ಪ್ರಥಮ ನಿರ್ದೇಶಕರಾಗಿದ್ದರು. ತಹಶೀಲ್ದಾರರಾಗಿ, ವಿಶ್ವವಿದ್ಯಾಲಯದ ಕುಲಸಚಿವರಾಗಿ, ಅಸಿಸ್ಟೆಂಟ್ ಕಮೀಷನರಾಗಿ, ಮುನ್ಸಿಪಲ್ ಕಮೀಷನರಾಗಿ, ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಣಾಧಿಕಾರಿಯಾಗಿ, ನೀರಾವರಿ ಯೋಜನೆಗಳ ಆಡಳಿತಾಧಿಕಾರಿಯಾಗಿ, ವಿಶೇಷ ಜಿಲ್ಲಾಧಿಕಾರಿಯಾಗಿ, ವಿದ್ಯಾ ಇಲಾಖೆಯ ಉಪಕಾರ್ಯದರ್ಶಿಯಾಗಿ, ಜಿಲ್ಲಾಧಿಕಾರಿಯಾಗಿ, ಹಲವು ಆಡಳಿತಾತ್ಮಕ ಬಹುಮುಖ ಹುದ್ದೆಗಳನ್ನು ನಿಭಾಯಿಸಿದರು. ಕನ್ನಡ ಸಾಹಿತ್ಯ ಮತ್ತು ಸಾಮಾಜಿಕ ಲೋಕವನ್ನು ಗಟ್ಟಿಗೊಳಿಸುತ್ತಾ ಬಂದ ಇವರ ಬದುಕನ್ನು , ಜೀವನ ಸಾಧನೆಯನ್ನು ಡಾ. ಬಸವರಾಜ ಸಬರದ ರು ಈ ಕೃತಿಯಲ್ಲಿ ತೆರೆದಿಟ್ಟಿದ್ದಾರೆ.
ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನನ್ನವರ ಹಾಡು, ಹೋರಾಟ, ...
READ MORE