ಸರಳ ಸತ್ವ ಮತ್ತು ಸ್ವಾಯತ್ತ ಮನೋಧರ್ಮದ ಹಳ್ಳಿಯವರ ಬರಹಗಳು ಕನ್ನಡದ ಸಾಂಸ್ಕೃತಿಕ ಚಹರೆಗಳನ್ನು ವಿಸ್ತರಿಸುವಂತಿದೆ. ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಅಪಾರ ಓದು, ಮತ್ತು ಒಳನೋಟಗಳ ಪರಿ ಇಲ್ಲಿ ಸೂಕ್ಷ್ಮವಾಗಿ ಓದುಗರಿಗೆ ಹತ್ತಿರವಾಗುತ್ತದೆ. ಸಣ್ಣ ಪುಟ್ಟ ಸಂಗತಿಗಳಲ್ಲಿಯೇ ಬದುಕಿದ ಅನನ್ಯತೆ ಮತ್ತು ಮಹತ್ತು ಅಡಗಿದೆ ಎಂಬುದನ್ನು ಈ ಪ್ರಬಂಧಗಳು ಕಂಡರಿಸಿವೆ.
ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...
READ MORE