ಜೀವನ ಕೌಶಲಗಳು ಜೀವನದ ಹಾದಿಯನ್ನು ತೋರಿಸಿ ಅರ್ಥಪೂರ್ಣವಾದ ಬದುಕನ್ನು ಕಟ್ಟಿಕೊಳ್ಳಲು ನೆರವಾಗುವಂತವು. ಯಾವುದೇ ಕ್ಷಣದಲ್ಲಾದರೂ, ಎಂತಹ ಪರಿಸರದಲ್ಲಾದರೂ, ಯಾವ ಗುಂಪಿನ ಜೊತೆಗಾದರು ಬದುಕುವಲ್ಲಿ ಜೀವನ ಕೌಶಲಗಳು ಪ್ರಮುಕ ಪಾತ್ರ ವಹಿಸುತ್ತದೆ. ಇಂತಹ ಜೀವನಕೌಶಲಗಳನ್ನು ಒಬ್ಬರು ಇನ್ನೊಬ್ಬರಿಗೆ ಕಲಿಸಬಹುದೆ? ಚಿಕ್ಕ ಪ್ರಾಯದಿಂದಲೇ ಮಕ್ಕಳಿಗೆ ಜೀವನ ಕೌಶಲಗಳನ್ನು ಹೇಗೆ ಕಲಿಸಬಹುದು? ಎಂಬೆಲ್ಲ ಪ್ರಶ್ನೆಗಳನ್ನು ನಿವಾರಿಸುವ ಕೃತಿ ಇದು.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE