ಜೀವಜಗತ್ತಿನಲ್ಲಿ ಇಂದ್ರಿಯ ಎನ್ನುವ ವಿಶೇಷ ಅಂಗಗಳು ಪರಿಸರದ ಗ್ರಹಿಕೆಗಾಗಿ ರೂಪುಗೊಂಡವು. ಜೀವಿಗಳು ಆಹಾರವನ್ನು ಸಂಪಾದಿಸಲು, ಸಂಗಾತಿಯನ್ನು ಅರಸಲು ಹಾಗೂ ಶತ್ರುಗಳಿಂದ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಇಂದ್ರಿಯಗಳು ನೆರವಾಗುತ್ತವೆ. ಆಧುನಿಕ ವಿಜ್ಞಾನವು ಈ ಸಾಂಪ್ರದಾಯಿಕ ಇಂದ್ರಿಯಗಳ ಜೊತೆಯಲ್ಲಿ, ಇನ್ನೂ ಹಲವು ಇಂದ್ರಿಯಗಳಿರುವುದನ್ನು ಗುರುತಿಸಿದ ಬಗೆ, ಮನುಷ್ಯರಲ್ಲಿ ಕಂಡುಬರುವ ಕೆಲವು ವಿಶೇಷ ಇಂದ್ರಿಯಗಳ ಕುರಿತು ಇಲ್ಲಿ ತಿಳಿಸಿದ್ಧಾರೆ ಲೇಖಕ ಡಾ. ನಾ. ಸೋಮೇಶ್ವರ.
ಜ್ಞಾನೇಂದ್ರಿಯಗಳ ರಚನೆ, ಉಗಮ, ಕಾರ್ಯಕ್ಷಮತೆ ಕುರಿತು ಇಲ್ಲಿ ವಿವರಿಸಲಾಗಿದೆ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಬಲ್ಲುದು. ಈ ಕೃತಿಗೆ 2012ರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗೆ ಭಾಜನವಾಗಿದೆ.
ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...
READ MORE