ಮಹಾರಾಷ್ಟ್ರದ ಆಯಾ ಪ್ರಾಂತ್ಯಗಳ ಸಾಹಿತ್ಯ, ಸಂಸ್ಕೃತಿಯ ಅಧ್ಯಯನ ಮಾಡಿ ಲೇಖಕ ಮಲ್ಲಿಕಾರ್ಜುನ ಹಿರೇಮಠ ಅವರು ಪ್ರವಾಸ ಕಥನ ದಾಖಲಿಸಿರುವುದು ಈ ಕೃತಿ ವಿಶೇಷ. ಮಹಾರಾಷ್ಟ್ರದ ಸಾಹಿತ್ಯ, ಸಂಸ್ಕೃತಿಯ ಜೊತೆಗೆ ಆ ಪ್ರದೇಶದ ಕಲೆ ಸಂಪ್ರದಾಯ, ನದಿ, ಬೆಟ್ಟ, ಪರಿಸರ ಮುಂತಾದುವನ್ನು ಇಲ್ಲಿಯ ಕಥನಗಳು ಬಿಂಬಿಸುತ್ತವೆ ಮಾತ್ರವಲ್ಲ; ಆಯಾ ಪ್ರದೇಶದ ವಿವಿಧ ಸಮಸ್ಯೆಗಳತ್ತಲೂ ಗಮನ ಸೆಳೆಯುತ್ತವೆ.
ಲೇಖಕ ಮಲ್ಲಿಕಾರ್ಜುನ ಹಿರೇಮಠ ಅವರದ್ದು ವಿವೇಚನಾಪೂರ್ಣ ಸಾಹಿತ್ಯ ಮತ್ತು ವ್ಯಕ್ತಿತ್ವ. ಹುಟ್ಟಿದ್ದು ಕೊಪ್ಪಳ ಜಿಲ್ಲೆಯ ಬಿಸರಹಳ್ಳಿ 1946 ಜೂನ್ 05ರಂದು. ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವೀಧರರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಸದ್ಯ ನಿವೃತ್ತರಾಗಿದ್ದಾರೆ. 'ಆಕ್ವೇರಿಯಂ ಮೀನು' ಅವರ ಮೊದಲ ಕವನ ಸಂಕಲನ 1974ರಲ್ಲಿ ಪ್ರಕಟವಾಯಿತು. ‘ಅಮೀನಪುರದ ಸಂತೆ, ಜ್ಞಾನೇಶ್ವರನ ನಾಡಿನಲ್ಲಿ (ಪ್ರವಾಸ ಕಥನ), ಅಂತರ್ಗತ (ವಿಮರ್ಶೆ), ಅಭಿಮುಖ (ವಿಮರ್ಶೆ), ಹವನ (ಕಾದಂಬರಿ), 'ಮೊಲೆವಾಲು ನಂಜಾಗಿ' (ಕತಾ ಸಂಕಲನ), ಮೂರುಸಂಜೆ ಮುಂದ ಧಾರವಾಡ (ಲಲಿತ ಪ್ರಬಂಧಗಳು), ಗಿರಡ್ಡಿ ಗೋವಿಂದರಾಜ : ವ್ಯಕ್ತಿ-ಆಭಿವ್ಯಕ್ತಿ (ವಿಮರ್ಶೆ)’ ಅವರ ಪ್ರಮುಖ ಕೃತಿಗಳು. ಅವರ ಸಾಹಿತ್ಯ ಸೇವೆಗೆ ‘ಕನಾಟಕ ...
READ MORE