ಭಾರತದಲ್ಲಿ ಸೃಜನಶೀಲ ಸಾಹಿತ್ಯವನ್ನು ಗುರುತಿಸಿ ಗೌರವಿಸುದಕ್ಕಾಗಿ 1961 ರಲ್ಲಿ ಜ್ಞಾನಪೀಠ ಪ್ರಶಸ್ತಿ ಸ್ಥಾಪಿಸಲಾಯಿತು. ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದ ಜ್ಞಾನಪೀಠ ಟ್ರಸ್ಟ್ ವತಿಯಿಂದ ಈ ಪುರಸ್ಕಾರ ನೀಡಲಾಗುತ್ತಿದೆ. ಭಾರತದ ಸಂವಿಧಾನದಿಂದ ಅಧಿಕೃತವೆಂದು ಮಾನ್ಯತೆ ಪಡೆದ ಭಾಷೆಗಳ ಜ್ಞಾನಪೀಠ ಪ್ರಶಸ್ತಿ ನೀಡಲಾಗುತ್ತದೆ. 1961 ರಿಂದ 2018 ಮಾಚ್ ೯ವರೆಗೆ ಒಟ್ಟು 15 ಭಾಷೆಗಳ ಕೃತಿಗಳು ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾಗಿವೆ. ಕನ್ನಡಕ್ಕೆ ಇದುವರೆಗೆ ಎಂಟು ಬಾರಿ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಕುವೆಂಪು, ಬೇಂದ್ರೆ, ಮಾಸ್ತಿ, ಶಿವರಾಮ ಕಾರಂತ, ವಿ.ಕೃ. ಗೋಕಾಕ್, ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಇವರು ಕನ್ನಡದಲ್ಲಿ ಜ್ಞಾನಪೀಠ ಪಡೆದ ಸಾಹಿತಿಗಳು. ಜ್ಞಾನಪೀಠ ಪಡೆದ ಕನ್ನಡ ಸಾಹಿತಿಗಳ ಬದುಕಿನ ಸಂಕ್ಷಿಪ್ತ ಚಿತ್ರಣವನ್ನು ಈ ಕೃತಿಯಲ್ಲಿ ನೀಡಲಾಗಿದೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE