ಕೆ.ಎಸ್. ನರಸಿಂಹಸ್ವಾಮಿ ಅವರ ಆಯ್ದ ಕವಿತೆಗಳು

Author : ಕೆ.ಎಸ್. ನರಸಿಂಹಸ್ವಾಮಿ

Pages 108

₹ 75.00




Year of Publication: 2006
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

’ಮೈಸೂರು ಮಲ್ಲಿಗೆ’ಯ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿಯೇ ಸಿಕ್ಸರುಗಳನ್ನು ಬಾರಿಸಿದ ಪ್ರೇಮಕವಿ ಕೆ.ಎಸ್. ನರಸಿಂಹಸ್ವಾಮಿ. ತಮ್ಮ ಸುಕೋಮಲ ಭಾವನೆಗಳನ್ನು ಕೌಟುಂಬಿಕ-ಪ್ರೇಮಗೀತೆಗಳಲ್ಲಿ ಸೊಗಸಾಗಿ ಸೆರೆ ಹಿಡಿದವರು ನರಸಿಂಹಸ್ವಾಮಿಗಳು. ಪ್ರೀತಿ-ಪ್ರೇಮ- ಪ್ರಣಯದ ವಿವಿಧ ಆಯಾಮಗಳನ್ನು ನರಸಿಂಹಸ್ವಾಮಿ ಅವರ ಕವಿತೆಗಳು ಬಿಂಬಿಸುತ್ತವೆ. ಓದುಗನ-ಕೇಳುಗನ ಮನಸೂರೆಗೊಳ್ಳುವಂತಹ ಕವಿತೆಗಳನ್ನು ರಚಿಸಿರುವ ಕೆ.ಎಸ್. ನ. ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಕೆ.ಎಸ್. ನರಸಿಂಹಸ್ವಾಮಿ
(26 January 1915 - 28 December 2003)

ಮೈಸೂರ ಮಲ್ಲಿಗೆಯ ಕವಿಯೆಂದು ಪ್ರಖ್ಯಾತರಾಗಿ ಮನೆಮಾತಾದ ಕೆ.ಎಸ್. ನರಸಿಂಹಸ್ವಾಮಿ ಅವರು (ಕಿಕ್ಕೇರಿ ಸುಬ್ಬರಾಯ ನರಸಿಂಹಸ್ವಾಮಿ) ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 1915ರ ಜನೆವರಿ 26ರಂದು ಜನಿಸಿದರು. ತಂದೆ ಸುಬ್ಬರಾಯ, ತಾಯಿ ನಾಗಮ್ಮ. ಮೈಸೂರಿನ ಮಹಾರಾಜ ಹೈಸ್ಕೂಲು, ಇಂಟರ್ ಮೀಡಿಯೇಟ್ ಕಾಲೇಜ್ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜುಗಳಲ್ಲಿ ಓದಿದ ಅವರು ಆರ್ಥಿಕ ತೊಂದರೆಗಳಿಂದ ಡಿಗ್ರಿ ವ್ಯಾಸಂಗವನ್ನು ಪೂರ್ಣ ಮಾಡಲಾಗಲಿಲ್ಲ. 22ನೇ ವಯಸ್ಸಿನಲ್ಲಿ ಗುಮಾಸ್ತೆ ಹುದ್ದೆಗೆ ಸೇರಿದ್ದರು. ಆ ವೇಳೆಗೆ ತಿಪಟೂರಿನ ವೆಂಕಮ್ಮನವರೊಂದಿಗೆ ವಿವಾಹವಾಗಿತ್ತು. ತಮ್ಮ ವೃತ್ತಿಜೀವನದ ಕಾಲದಲ್ಲಿ ಮೈಸೂರು, ನಂಜನಗೂಡು, ಬೆಂಗಳೂರುಗಳಲ್ಲಿ ಬೇರೆ ಬೇರೆ ಇಲಾಖೆಗಳಲ್ಲಿ ಸರಕಾರಿ ನೌಕರರಾಗಿ ದುಡಿದು ...

READ MORE

Related Books