ಕ.ವೆಂ. ರಾಘವಾಚಾರ್ ಅಕ್ಷರ ಜಗತ್ತಿನ ಕಂಪನ್ನು ಹರಡಿದ, ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ಬಿಡಿ ಬರಹಗಳ ಮೂಲಕ ಕನ್ನಡ ಸಾಹಿತ್ಯ ವಿಮರ್ಶಾ ಲೋಕವನ್ನು ಸಮೃದ್ಧಗೊಳಿಸಿದ್ದಾರೆ. ಗ್ರೀಕ್ ನಾಟಕಗಳನ್ನು ಹಾಗೂ ಅರಿಸ್ಟಾಟಲ್‌ನ ಕಾವ್ಯ ಮೀಮಾಂಸೆಯನ್ನೂ ಕನ್ನಡಕ್ಕೆ ಅನುವಾದಿಸುವ ಮೂಲಕ ಕನ್ನಡಿಗರ ಕೈಗೆಟುಕುವಂತೆ ಮಾಡಿದವರು. ನಿಘಂಟುಕಾರರಾಗಿ, ಭಾಷಾತಜ್ಞರಾಗಿ, ಗ್ರಂಥ ಸಂಪಾದಕರಾಗಿ, ಅನುವಾದಕರಾಗಿ, ಅಧ್ಯಾಪಕರಾಗಿ, ವಾಗ್ಮಿಯಾಗಿ ಕನ್ನಡ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತಿನ ಏಳಿಗೆಗೆ ತಮ್ಮನ್ನು ತಾವು ತೊಡಗಿಸಿಕೊಂಡವರು. ಇವರ ರ ಬದುಕನ್ನು, ಜೀವನ ಸಾಧನೆಯನ್ನು ಟಿ.ವಿ.ವೆಂಕಟಾಚಲಶಾಸ್ತ್ರಯವರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಸಂಶೋಧಕ, ಪ್ರಾಧ್ಯಾಪಕ ಟಿ.ವಿ.ವೆಂಕಟಾಚಲ ಶಾಸ್ತ್ರೀ ಅವರು ಕನ್ನಡ ಭಾಷೆಯನ್ನು ಶ್ರೀಮಂತಿಕೆ ಹೆಚ್ಚಿಸಿದವರು. ಶಾಸ್ತ್ರಿಗಳು,1933ರ ಆಗಸ್ಟ್ 26 ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಸುಬ್ಬಾಶಾಸ್ತ್ರಿಗಳು. ತಾಯಿ ಸುಬ್ಬಮ್ಮ. ಎಂ.ಎ. ಮತ್ತು ಪಿಎಚ್.ಡಿ. ಪದವಿ ಪಡೆದ ನಂತರ ವೆಂಕಟಾಚಲ ಶಾಸ್ತ್ರಿಗಳು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವೃತ್ತಿಯನ್ನು ಮಾಡಿ, ನಂತರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಕನ್ನಡ ನಿಘಂಟು ರಚನಾ ಸಮಿತಿಯ ಸಂಪಾದಕ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ನಿಘಂಟು ಪರಿಷ್ಕರಣ ಸಮಿತಿ ಪ್ರಧಾನ ಸಂಪಾದಕರಾಗಿದ್ದರು. ವ್ಯಾಕರಣ, ಛಂದಸ್ಸು, ...
READ MORE