ತಮ್ಮ ಸೃಜನಶೀಲ ರಂಗಭೂಮಿ ಹಾಗೂ ಸಾಹಿತ್ಯ ರಚನೆ ಮೂಲಕ ಸಾಗರದ ಹೆಗ್ಗೋಡು ನಂತಹ ಪಯುಟ್ಟ ಹಳ್ಳಿಯನ್ನು ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿಗೊಳಿಸಿದ ಕೀರ್ತಿ ಕೆ.ವಿ. ಸುಬ್ಬಣ್ಣ ಅವರಿಗೆ ಸಲ್ಲುತ್ತದೆ. ಅವರು 1954ರಿಂದ 2004ರವರೆಗೆ ಅಂದರೆ 50 ವರ್ಷಗಳ ಕಾಲ ವಿವಿಧ ಸಂದರ್ಭಗಳಲ್ಲಿ ಬರೆದ ಲೇಖನಗಳನ್ನು ಲೇಖಕ ಟಿ.ಪಿ. ಅಶೋಕ ಅವರು ಸಂಪಾದಿಸಿದ್ದಾರೆ.
ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...
READ MORE